ಬೆಂಗಳೂರು: ಅಂತಾರಾಜ್ಯ ಅಡಿಕೆ ವ್ಯಾಪಾರಿಯ 1 ಕೋಟಿ ರೂ. ಹಣ ಕಳವು ಪ್ರಕರಣ ಆರೋಪಿಗಳನ್ನು ಬೆಂಗಳೂರಿನ ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲಕ ಸಂತೋಷ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಅ.7 ರಂದು ಅಂತಾರಾಜ್ಯ ಅಡಿಕೆ ವ್ಯಾಪಾರಿ ಹೆಚ್.ಎಸ್. ಉಮೇಶ್ ಚಿತ್ರದುರ್ಗದಿಂದ ವಿವಿಧ ಜಿಲ್ಲೆಗಳ ಅಡಿಕೆ ಖರೀದಿಗಾಗಿ ಕಾರಿನಲ್ಲಿನೀಲಿ ಬಣ್ಣದ ಬ್ಯಾಗಿನಲ್ಲಿ ಬರೋಬ್ಬರಿ 1 ಕೋಟಿ ರೂ. ಹಣವನ್ನು ಕಾರಿನ ಡಿಕ್ಕಿಯಲ್ಲಿ ತಂದಿದ್ದರು. ಊಟಕ್ಕೆಂದು ಗಾಂಧೀನಗರದ ಹೋಟೆಲ್ ಮುಂಭಾಗ ಕಾರು ನಿಲ್ಲಿಸಿದ್ದರು. ನಂತರ ಚಂದ್ರಾಲೇಔಟ್, ದಾಬಸ್ ಪೇಟೆ ಬಳಿಯೂ ಕಾರು ನಿಲ್ಲಿಸಿದ್ದರು. ಸಂಜೆ 7:45 ರ ವೇಳೆಗೆ ಚಿತ್ರದುರ್ಗದ ಭೀಮಸಮುದ್ರದ ಅಂಗಡಿಗೆ ತೆರಳಿ ಕಾರಿನ ಡಿಕ್ಕಿ ಪರಿಶೀಲಿಸಿದಾಗ ಕಳವು ಬೆಳಕಿಗೆ ಬಂದಿತ್ತು. ಘಟನೆ ಸಂಬಂಧ ಉಪ್ಪಾರಪೇಟೆ ಪೊಲೀಸರಿಗೆ ದೂರು ನೀಡಲಾಗಿತ್ತು.
ಶಿರಾ, ತುಮಕೂರು ಮಾರ್ಗವಾಗಿ ಬೆಂಗಳೂರಿನ ಗಾಂಧೀನಗರಕ್ಕೆ ಬಂದಿದ್ದ ವೇಳೆ ಅಡಿಕೆ ವ್ಯಾಪಾರಿ ಉಮೇಶ್ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಹಿನ್ನಲೆ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಶಿರಾ, ತುಮಕೂರು ಮಾರ್ಗವಾಗಿ ಬೆಂಗಳೂರಿನ ಗಾಂಧೀನಗರಕ್ಕೆ ಬಂದಿದ್ದ ವೇಳೆ ಕಳವಾಗಿರಬಹುದು ಎಂದು ಶಂಕಿಸಲಾಗಿತ್ತು. ಆರೋಪಿಗಳನ್ನು ಬಂಧಿಸಿ ಉಪ್ಪಾರಪೇಟೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


