ಕಬ್ಬನ್ ಉದ್ಯಾನವನ್ನು ಸಂರಕ್ಷಿಸುವ ಉದ್ದೇಶದಿಂದ ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಂರಕ್ಷಣಾ ಸಮಿತಿಯನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಸಮಿತಿಯು 33 ಸದಸ್ಯರನ್ನು ಒಳಗೊಂಡಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು, ತಜ್ಞರು, ವಾಯುವಿಹಾರಿಗಳು ಮತ್ತು ಪರಿಸರವಾದಿ ಇದ್ದಾರೆ.
ಉದ್ಯಾನದ ಆವರಣದಲ್ಲಿ ನಡೆಯುವ ಚಟುವಟಿಕೆಗಳ ಸಾಧಕ-ಬಾಧಕಗಳನ್ನು ಪರಿಶೀಲಿಸಿ ತೆಗೆದುಕೊಳ್ಳುವ ನಿರ್ಣಯಗಳಿಗೆ ಸಂಬಂಧಪಟ್ಟ ಎಲ್ಲ ಇಲಾಖೆಗಳ ಸಂಸ್ಥೆಗಳು ಬದ್ಧರಾಗಬೇಕು ಎಂದು ತಿಳಿಸಿದೆ.


