ಬೆಂಗಳೂರು: ವಾರಕ್ಕೆ 70 ಗಂಟೆ ಕೆಲಸ ಮಾಡುವ ಅಗತ್ಯವಿಲ್ಲ, ಬದಲಿಗೆ ಕೆಲಸ ಮಾಡುವ ಸಮಯವನ್ನು ಹೆಚ್ಚು ಉಪಯುಕ್ತವಾಗಿ ಕಳೆದು, ಉಳಿದ ಸಮಯವನ್ನು ನಿಮ್ಮ ಕುಟುಂಬದೊಂದಿಗೆ ಕಳೆಯಿರಿ ಎಂದು ನ್ಯಾ.ಸಂತೋಷ್ ಹೆಗ್ಡೆ ಸಲಹೆ ನೀಡಿದರು.
ಬೆಂಗಳೂರಿನಲ್ಲಿ ಆಯೋಜಿಸಿದ್ದ ಟ್ರೇಡರ್ಸ್ ಮೀಟಪ್, ಎಜುಕೇಷನ್ ಹೀರೋಸ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಹೆಚ್ಚು ಸಮಯ ಕೆಲಸ ಮಾಡುವುದು ಹೆಚ್ಚು ಉತ್ಪಾದಕತೆ ಎನ್ನುವುದು ತಪ್ಪು ಕಲ್ಪನೆ. ಕೆಲಸ ಮಾಡುವ ಅವಧಿಯನ್ನು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುವುದಷ್ಟೇ ಮುಖ್ಯ ಎಂದರು.


