ಖ್ಯಾತ ನಟಿ ವಿಜಯಶಾಂತಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂದು ವರದಿಯಾಗಿದೆ. ತೆಲಂಗಾಣ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ನಟಿ ವಿಜಯಶಾಂತಿ ಅವರ ಹೆಸರು ಸೇರ್ಪಡೆಯಾಗಿಲ್ಲ. ಈ ಹಿನ್ನೆಲೆ ಅವರು ಮತ್ತು ಅವರ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ.
‘ಬಿಆರ್ ಎಸ್ ಕುಟುಂಬದ ರಾಜಕೀಯ ಆಡಳಿತದಿಂದ ಜನರನ್ನು ರಕ್ಷಿಸಲು ಕಾಂಗ್ರೆಸ್ ಹೋರಾಡಬೇಕು’ ಎಂದು ನಟಿ ವಿಜಯಶಾಂತಿ ಹೇಳಿಕೆ ನೀಡಿದ್ದಾರೆ. ಇವರು ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.


