ಒಡಿಶಾದಿಂದ ರೈಲಿನಲ್ಲಿ ಗಾಂಜಾ ತರಿಸಿಕೊಂಡು ನಗರದಲ್ಲಿ ಮಾರುತ್ತಿದ್ದ ಆರೋಪಿ ಹರ್ಷವರ್ಧನ್(25) ನನ್ನು ಆಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಹರ್ಷವರ್ಧನ್, ಸರಕು ಸಾಗಣೆ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ, ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಈತನಿಂದ 12 ಕೆ. ಜಿ 50 ಗ್ರಾಂ ಗಾಂಜಾ ಹಾಗೂ ಸರಕು ಸಾಗಣೆ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.


