nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026
    Facebook Twitter Instagram
    ಟ್ರೆಂಡಿಂಗ್
    • ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ
    • ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ
    • ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್
    • ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ
    • ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ
    • ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು
    • ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು
    • ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲರೂ ಭೂಗ್ರಹದ ರಕ್ಷಕರಾಗಬೇಕು: ಈಶ್ವರ ಖಂಡ್ರೆ
    ರಾಜ್ಯ ಸುದ್ದಿ November 4, 2023

    ಎಲ್ಲರೂ ಭೂಗ್ರಹದ ರಕ್ಷಕರಾಗಬೇಕು: ಈಶ್ವರ ಖಂಡ್ರೆ

    By adminNovember 4, 2023No Comments2 Mins Read
    eeshwar kandre

    ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಮಾಡುತ್ತಲೇ ಅಭಿವೃದ್ಧಿ ಸಾಧಿಸುವುದೇ ಸುಸ್ಥಿರ ಅಭಿವೃದ್ಧಿಯಾಗಿದ್ದು, ಜೀವರಾಶಿಯೂ ಉಳಿಯಬೇಕು, ಜೀವನೋಪಾಯವೂ ಇರಬೇಕು, ಇದರ ಜೊತೆಗೆ ಪ್ರಗತಿ ಸಾಧಿಸಬೇಕು ಎಂಬುದು ಸರ್ಕಾರದ ನಿಲುವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ.

    ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿಂದು ನಡೆದ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಬೆಂಗಳೂರು ಘೋಷಣೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರಕೃತಿ ಮತ್ತು ಪರಿಸರ, ಅರಣ್ಯ ಉಳಿದಾಗ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ. ಹೀಗಾಗಿ ನಾವು ನೀವೆಲ್ಲರೂ ಭೂಗ್ರಹದ ರಕ್ಷಕರಾಗಬೇಕು ಎಂದು ಕರೆ ನೀಡಿದರು.


    Provided by
    Provided by

    ಭಾರತದ ಸಿಲಿಕಾನ್ ವ್ಯಾಲಿ ಎಂದೇ ಖ್ಯಾತವಾದ ಬೆಂಗಳೂರು, ತಾಂತ್ರಿಕ ನಾವೀನ್ಯತೆಯ ಕೇಂದ್ರ ಮಾತ್ರವಲ್ಲ, ಸುಸ್ಥಿರ ಅಭಿವೃದ್ಧಿಯ ಅನ್ವೇಷಣೆಯಲ್ಲಿಯೂ ಮುಂಚೂಣಿಯಲ್ಲಿದೆ. ಜಗತ್ತು ಇಂದು ಎದುರಿಸುತ್ತಿರುವ ಸವಾಲುಗಳಿಗೆ ಕರ್ನಾಟಕ ಅದರಲ್ಲೂ ಬೆಂಗಳೂರಿನ ಉದ್ಯಮಿಗಳು ಪರಿಹಾರ ಸಂಶೋಧಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.

    ಈ ಶೃಂಗಸಭೆ ಸಕಲ ಜೀವರಾಶಿಗಳೂ ಬದುಕಲು ಇರುವ ಏಕೈಕ ಭೂಗ್ರಹ ಮತ್ತು ಅದರ ಎಲ್ಲಾ ನಿವಾಸಿಗಳಿಗೆ ಸುಸ್ಥಿರ ಭವಿಷ್ಯದ ಭರವಸೆಗಳನ್ನು ಖಾತ್ರಿ ಪಡಿಸಬೇಕು. ನಗರೀಕರಣ, ಸಂಚಾರ ದಟ್ಟಣೆ, ಮಾಲಿನ್ಯದಿಂದಾಗಿ ಇಂದು ಶುದ್ಧ ಗಾಳಿ, ಶುದ್ಧ ನೀರಿನ ಲಭ್ಯತೆಯ ಸಮಸ್ಯೆಗಳು ಎದುರಾಗಿವೆ. ಈ ಶೃಂಗಸಭೆಯ ವಸ್ತು ವಿಷಯ, ” ಸುಸ್ಥಿರ ಅಭಿವೃದ್ಧಿ ನಾಯಕತ್ವ,” ಎಂಬುದಾಗಿದ್ದು, ದೂರದೃಷ್ಟಿಯ ನಾಯಕತ್ವದ ಅಗತ್ಯವನ್ನು ಪ್ರತಿಪಾದಿಸಬೇಕು ಎಂದರು.

    ಸುಸ್ಥಿರ ಅಭಿವೃದ್ಧಿ ಎಂಬುದು ಕೇವಲ ಒಂದು ಪರಿಕಲ್ಪನೆಯಲ್ಲ; ಇದು ನೈತಿಕತೆಯಾಗಬೇಕು. ಬದ್ಧತೆಯಾಗಬೇಕು. ಇಂದು ನಾವು ಕೈಗೊಳ್ಳುವ ನಿರ್ಧಾರ, ಕ್ರಮಗಳಿಂದ ಭವಿಷ್ಯದ ಕ್ಷೇಮದೊಂದಿಗೆ ರಾಜೀ ಮಾಡಿಕೊಳ್ಳದಂತಿರಬೇಕು. ಭವಿಷ್ಯದ ಪೀಳಿಗೆಗೆ ಸಮೃದ್ಧ ಭೂಮಿಯನ್ನು ಸುಸ್ಥಿರ ಅಭಿವೃದ್ಧಿಯ ಪ್ರಯೋಜನಗಳು ಕಟ್ಟಕಡೆಯ ವ್ಯಕ್ತಿಗೂ ಲಭ್ಯವಾಗಬೇಕು, ನಾವು ಅಂತರ್ಗತ ಬೆಳವಣಿಗೆಗೆ ಆದ್ಯತೆ ನೀಡಬೇಕು,  ಸಾಮಾಜಿಕ ನ್ಯಾಯ, ಅಸಮಾನತೆಯನ್ನು ನಿವಾರಣೆಗೆ ಒತ್ತು ನೀಡಬೇಕು ಎಂದರು.

    ಇಂಗಾಲದ ಹೊರಸೂಸುವಿಕೆ ತಗ್ಗಿಸಲು ಶುದ್ಧ ಇಂಧನಕ್ಕೆ ಹೆಚ್ಚು ಒತ್ತು ನೀಡಬೇಕು.  ಸುಸ್ಥಿರ ಅಭಿವೃದ್ಧಿಗೆ ನಾವೀನ್ಯಪೂರ್ಣ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಬೇಕು. ಕೃಷಿ, ಇಂಧನ ಮತ್ತು ಆರೋಗ್ಯ ಆರೈಕೆ ಕ್ಷೇತ್ರದಲ್ಲೂ ಉತ್ತಮ ರೂಢಿಗಳನ್ನು ಅಳವಡಿಸಿಕೊಳ್ಳಬೇಕು. ಶಿಕ್ಷಣದ ಹಂತದ್ಲೇ ಸುಸ್ಥಿರ ಅಭಿವೃದ್ಧಿಯ ಪರಿಕಲ್ಪನೆಯನ್ನು ಮೂಡಿಸಬೇಕು ಎಂದು ಹೇಳಿದರು.

    ಸುಸ್ಥಿರ ಅಭಿವೃದ್ಧಿಗೆ ದೀರ್ಘಕಾಲೀನ ದೃಷ್ಟಿಕೋನದ ಅಗತ್ಯವಿದೆ ಎಂದು ಪ್ರತಿಪಾದಿಸಿದ ಈಶ್ವರ ಖಂಡ್ರೆ, ಹವಾಮಾನ ವೈಪರೀತ್ಯ, ಜಾಗತಿಕ ತಾಪಮಾನದ ಪರಿಣಾಮವನ್ನು ತಗ್ಗಿಸುವ ಮತ್ತು ನಮ್ಮ ಪರಿಸರವನ್ನು ರಕ್ಷಿಸುವ ಕಾರ್ಯತಂತ್ರಗಳು ಈ ಶೃಂಗಸಭೆಯಲ್ಲಿ ಹೊರಹೊಮ್ಮಲಿ ಎಂದು ಆಶಿಸಿದರು.

    ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಜನರ ಪಾಲ್ಗೊಳ್ಳುವಿಕೆ ಅಗತ್ಯ ಎಂದು ಹೇಳಿದ ಅವರು, ಜೀವ ವೈವಿಧ್ಯತೆಯನ್ನು ರಕ್ಷಿಸುವ ಮತ್ತು ಪುನಃಸ್ಥಾಪಿಸುವ ತಕ್ಷಣದ ಅಗತ್ಯವನ್ನು ಚರ್ಚಿಸುವತ್ತ ಈ ಶೃಂಗಸಭೆ ಗಮನ ಹರಿಸಬೇಕು ಎಂದು ಸಲಹೆ ಮಾಡಿದರು.

    ಶೃಂಗದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ನಿವೃತ್ತ ಮುಖ್ಯಕಾರ್ಯದರ್ಶಿ ಎ. ರವೀಂದ್ರ ಮತ್ತಿತರರು ಪಾಲ್ಗೊಂಡಿದ್ದರು.

     

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ಕೆಂಗೇರಿ: ಉಪನಗರದಲ್ಲಿರುವ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ಕಾಲೇಜಿನಲ್ಲಿ ಮಂಗಳವಾರದಂದು “ಸಶಕ್ತ ಭಾರತಕ್ಕಾಗಿ ಸಮಾನ ಅವಕಾಶಗಳು” ಎಂಬ ವಿಷಯದಡಿ…

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026

    ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.