ಬೆಂಗಳೂರಿನಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ನಗರಕ್ಕೆ ಪ್ರತ್ಯೇಕ ಸಮರ್ಪಿತ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡುವಂತೆ ಸೂಚಿಸಿದ್ದಾರೆ.


