ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂದು ಶಿರಾ ವಿಭಾಗದ ಭದ್ರಾ ಮೇಲ್ದಂಡೆ ಕಾರ್ಯಪಾಲಕ ಇಂಜಿನಿಯರ್ ರಾಮದಾಸಪ್ಪಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ವ್ಯಕ್ತಿಯನ್ನು ವಿಧಾನಸೌಧ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಟ್ಟೆಗಾರಪಾಳ್ಯದ ತ್ಯಾಗರಾಜ್ (68) ಬಂಧಿತ ಆರೋಪಿ, ಆರೋಪಿ ತ್ಯಾಗರಾಜ್ ಕಾರ್ಯಪಾಲಕ ಇಂಜಿನಿಯರ್ ರಾಮದಾಸಪ್ಪಗೆ ಕರೆ ಮಾಡಿ, ನಾನು ಲೋಕಾಯುಕ್ತ ಇನ್ಸ್ ಪೆಕ್ಟರ್ ಎಂದು ಹಣಕ್ಕೆ ಬೇಡಿಕೆ ಇಟ್ಟ. ಇದರಿಂದ ಅನುಮಾನಗೊಂಡು ದೂರು ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.


