ತುಮಕೂರು: ಜಾನುವಾರುಗಳಿಗೆ ಮೇವುಗಳ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಈ ವಾರ ಜಿಲ್ಲೆಯ ರೈತರಿಗೆ ಮೇವು ಬೀಜಗಳನ್ನು ವಿತರಿಸಲು ಸೂಚಿಸಲಾಗಿದ್ದು ,ಜಿಲ್ಲೆಯಿಂದ ಬೇರೆ ಸ್ಥಳಗಳಿಗೆ ಮೇವು ಮಾರಾಟ ಮಾಡುವದನ್ನು ನಿಷೇಧಿಸಲಾಗವುದು, ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ರವರು ಹೇಳಿದರು.
ಮಧುಗಿರಿ ತಾಲೂಕಿನ ನಿರೀಕ್ಷಣಾ ಮಂದಿರದ ಸಭಾಂಗಣದಲ್ಲಿ ನಡೆದ ‘ಬರ ಪರಿಸ್ಥಿತಿ ಹಾಗೂ ಕಂದಾಯ ವಿಷಯಗಳ ಕುರಿತ ಪತ್ರಿಕಾಗೋಷ್ಠಿಯ ಉದ್ದೇಶಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನೀರಿರುವ ಕೆರೆಗಳ ಸದ್ಬಳಕೆ ಮಾಡಿಕೊಂಡು, ಪಶುಗಳಿಗಾಗಿ ಮೇವುಗಳನ್ನು ಬೆಳೆಸಿ , ಮುಂದಿನ ಬೇಸಿಗೆಯಲ್ಲಿ ಪಶುಗಳಿಗೆ ಮೇವು ಕೊರತೆಯಾಗದಂತೆ ವಿವಿಧ ಹಂತಗಳಲ್ಲಿ ಮೇವು ಸಂಗ್ರಹಿಸಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ, ಜಿಲ್ಲೆಯಲ್ಲಿ ಸಮರ್ಪಕ ಕುಡಿಯುವ ನೀರು ಸರಬರಾಜುಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿಲ್ಲ . ರಾಜ್ಯದ 223 ತಾಲೂಕಗಳನ್ನು ಬರ ಪೀಡಿತ ತಾಲೂಕುಗಳನ್ನಾಗಿ ಘೋಷಿಸಲಾಗಿದೆ, ಇಡೀ ರಾಜ್ಯ ಬರ ಪೀಡಿತವಾಗಿದೆ, ಬೆಳೆ ನಷ್ಟ, ಜಾನುವಾರು ನಷ್ಟ ಸೇರಿದಂತೆ ಒಟ್ಟು 37 ಸಾವಿರ ಕೋಟಿ ನಷ್ಟವಾಗಿದ್ದರೂ, ಕೇಂದ್ರ ಸರ್ಕಾರ ದಿಂದ 17 ಸಾವಿರ ಕೋಟಿ ಬರ ಪರಿಹಾರ ಕೇಳಲಾಗಿದೆ,ಬರ ನಿರ್ವಹಣೆಗೆ ರಾಜ್ಯ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಬರ ನಿರ್ವಹಣೆಗಾಗಿ ಎಲ್ಲಾ ಜಿಲ್ಲೆಗಳಿಗೂ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿ ದೆ, ಇದಕ್ಕಾಗಿ ಜಿಲ್ಲೆಗೆ 15 ಕೋಟಿ ರೂ ಬಿಡುಗಡೆ ಮಾಡಲಾಗಿದೆ, ಜಿಲ್ಲಾಡಳಿತದ ಬಳಿ 500 ಕೋಟಿಗೂ ಹೆಚ್ಚು ಹಣವಿದೆ ಇದರೊಂದಿಗೆ ಪಿಡಿ ಖಾತೆಯಲ್ಲಿ ಇರುವ 19 ಕೋಟಿ ಹಣವಿದ್ದು ಬರ ನಿರ್ವಹಣೆಗಾಗಿ ಬಳಸಿಕೊಳ್ಳಲಾಗುವುದು. ಹಣದ ಕೊರತೆ ಸರ್ಕಾರದಲ್ಲಿ ಇಲ್ಲ ಎಂದರು.
ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎಲ್ಲಾ ಮುಂದಿನ ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಹಾಗೂ ಪಶುಗಳಿಗೆ ತೊಂದರೆಯಾಗದಂತೆ ಕುಡಿಯುವ ನೀರು ಸೇರಿದಂತೆ ಮೊದಲಾದ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ , ಬರ ಪರಿಸ್ದಿಯಲ್ಲಿ ಜಿಲ್ಲೆಯಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, 500 ಕೋಟಿ ವೆಚ್ಚದ ನರೇಗಾ ಕಾಮಗಾರಿಗಳನ್ನು ಅನುಷ್ಟಾನ ಗೊಳಿಸಲಾಗುತ್ತಿದೆ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 300 ರಿಂದ 500 ಜನ ಹಾಗೂ ಪ್ರತಿ ರೈತನಿಗೆ 30ರಿಂದ 50 ಸಾವಿರ ವರೆಗಿನ ವೆಚ್ಚದ ಕಾಮಗಾರಿಯಂತೆ ಜಿಲ್ಲೆಯ ಒಂದು ಲಕ್ಷ ರೈತರನ್ನು ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ , ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ ಅಂಗನವಾಡಿ ಶಾಲೆ, ಆಸ್ಪತ್ರೆ , ಇತರೆ ಸರ್ಕಾರಿ ಕಟ್ಟಡ , ರಸ್ತೆ ಮೊದಲಾದ ಸಮುದಾಯ ಆಧಾರಿತ ಕಾಮಗಾರಿಗಳ ಅನುಷ್ಟಾನ ಗೊಳಿಸಲಾಗುತ್ತಿದೆ ಎಂದರು,
ಸಹಕಾರ ಸಚಿವ ಕೆ.ಎನ್ ರಾಜಣ್ಣ ಮಾತನಾಡಿ ಬರ ಪರಿಸ್ದಿಯಲ್ಲಿ ರೈತರು ಸರ್ಕಾರ ದ ನರೇಗಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು
ಶಾಸಕ ಆರ್ ರಾಜೇಂದ್ರ ರಾಜಣ್ಣ, ಜಿಲ್ಲಾಧಿಕಾರಿ ಶಿವಾನಂದ ಶ್ರೀನಿವಾಸ ಕೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು . ಉಪವಿಭಾಗಾಧಿಕಾರಿ ರಿಷಿ ಆನಂದ್ ಕೃಷಿ ಇಲಾಖೆ ಉಪ ನಿರ್ದೇಶಕಿ ದೀಪಶ್ರೀ,ಮತ್ತಿತರರು ಉಪಸ್ಥಿತರಿದ್ದರು.