ಬೆಂಗಳೂರು: ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ವರಿಷ್ಠ ಅಮಿತ್ ಶಾ ಈ ಎಲ್ಲರೂ ತಮ್ಮ ಪುತ್ರ ಬಿ.ವೈ. ವಿಜಯೇಂದ್ರನಿಗೆ ಪಕ್ಷದ ರಾಜ್ಯಾಧ್ಯಕ್ಷ ನೀಡಿ ಸೂಕ್ತ ಸಮಯಕ್ಕೆ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರ್ಧಾರ ತೆಗೆದುಕೊಂಡ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಲೋಕಸಭೆ ಗೆಲ್ಲುವುದು ನಮ್ಮ ಗುರಿಯಾಗಿದೆ. 25 ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು. ಲೋಕಸಭಾ ಚುನಾವಣೆ ಗೆಲ್ಲುವ ಗುರಿ ಮುಟ್ಟಲು ಕಷ್ಟವಿಲ್ಲ. ಈ ನಿಟ್ಟಿನಲ್ಲಿ ನಾನು ಕೂಡ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ. ನಾವು ಪ್ರವಾಸ ಮಾಡಿದ ಮೇಲೆ ಜನರ ಪ್ರತಿಕ್ರಿಯೆ ನೋಡಿದ ಮೇಲೆ ಕಾಂಗ್ರೆಸ್ ನವರಿಗೆ ತಿಳಿಯಲಿದೆ. ನಮಗೆಲ್ಲ ಮೋದಿಯಂತಹ ಮಹಾನ್ ವ್ಯಕ್ತಿ ಪ್ರಧಾನಿಯಾಗಿದ್ದಾರೆ ಎಂದರು.


