ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಅವಘಡಗಳು ಸಂಭವಿಸಿದಲ್ಲಿ ಕಣ್ಣಿಗೆ ಹಾನಿಯಾಗುವುದನ್ನು ತಪ್ಪಿಸಲು ನಗರದ ಕಣ್ಣಿನ ಆಸ್ಪತ್ರೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಹಬ್ಬದ ದಿನಗಳಲ್ಲಿ 24×7 ಸೇವೆ ನೀಡಲು ಸಜ್ಜಾಗಿವೆ.
ಮಿಂಟೊ, ನಾರಾಯಣ ನೇತ್ರಾಲಯ, ನೇತ್ರಧಾಮ, ಶಂಕರ, ಡಾ. ಅಗರವಾಲ್ ಸೇರಿ ವಿವಿಧ ಕಣ್ಣಿನ ಆಸ್ಪತ್ರೆಗಳು ಚಿಕಿತ್ಸೆಗೆ ಬೇಕಾದ ಔಷಧಗಳನ್ನು ದಾಸ್ತಾನು ಮಾಡಿಕೊಂಡಿವೆ. ಅದೇ ರೀತಿ, ಪ್ರತ್ಯೇಕ ಹಾಸಿಗೆ ವ್ಯವಸ್ಥೆ ಮಿಂಟೊ, ನಾರಾಯಣ ನೇತ್ರಾಲಯ ಆಸ್ಪತ್ರೆಗಳಲ್ಲಿ ಮಾಡಲಾಗಿದೆ.
ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಪಟಾಕಿ ಅವಘಡಗಳು ಸಂಭವಿಸಿದ್ದಲ್ಲಿ ಕಣ್ಣಿಗೆ, ಚರ್ಮಕ್ಕೆ ಹಾನಿಯಾಗುವುದನ್ನು ತಡೆಗಟ್ಟಲು ಆಸ್ಪತ್ರೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿವೆ. ಹಬ್ಬದ ಸಮಯದಲ್ಲಿ 24X7 ಚಿಕಿತ್ಸೆ ನೀಡಲು ಬೆಂಗಳೂರು ನಗರದ ಮಿಂಟೊ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳು ಸಜ್ಜಾಗಿವೆ.
ಆಸ್ಪತ್ರೆಗೆ ಬರುವ ಗಾಯಾಳುಗಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲು ಮಿಂಟೋ ಕಣ್ಣಿನ ಆಸ್ಪತ್ರೆ ವೈದ್ಯರು ಮುಂದಿನ ಒಂದು ವಾರ 24X7 ಕಾರ್ಯನಿರ್ವಹಿಸಲಿದ್ದಾರೆ ಅಂತಾ ಅಧಿಕಾರಿಗಳು ಹೇಳಿದ್ದಾರೆ.


