ತುಮಕೂರು: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಇಂದು ಹಾಗೂ ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಈ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗಿದ್ದು, ನವೆಂಬರ್ 19 ಮತ್ತು 20ರಂದು ಜಿಲ್ಲೆಯಾದ್ಯಂತ ಅಂಗನವಾಡಿ/ಶಿಶುವಿಹಾರ ಹಾಗೂ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಕಿರಿಯ, ಹಿರಿಯ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ.
ರಜೆ ಘೋಷಿಸಲಾದ ದಿನಗಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಿಕೊಳ್ಳುವಂತೆ ಇದೇ ಸಂದರ್ಭದಲ್ಲಿ ಸೂಚಿಸಲಾಗಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700