nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026
    Facebook Twitter Instagram
    ಟ್ರೆಂಡಿಂಗ್
    • ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ
    • ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ
    • ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್
    • ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ
    • ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ
    • ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು
    • ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು
    • ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಸಿದ್ಧಾಂತ ಬೆಂಬಲಿಸಿ ಬರುವವರಿಗೆ ಸ್ವಾಗತ: ಮುಖ್ಯಮಂತ್ರಿ ಸಿದ್ದರಾಮಯ್ಯ
    ರಾಜ್ಯ ಸುದ್ದಿ November 12, 2023

    ಕಾಂಗ್ರೆಸ್ ಸಿದ್ಧಾಂತ ಬೆಂಬಲಿಸಿ ಬರುವವರಿಗೆ ಸ್ವಾಗತ: ಮುಖ್ಯಮಂತ್ರಿ ಸಿದ್ದರಾಮಯ್ಯ

    By adminNovember 12, 2023No Comments2 Mins Read
    siddharamayya

    ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಆಪರೇಷನ್ ಹಸ್ತ ಕೈಗೊಳ್ಳುತ್ತಿದೆ ಎಂಬ ಆರೋಪದ ಬಗ್ಗೆ ಉತ್ತರಿಸುತ್ತಾ, ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ಗೆ ಬರಲಿದ್ದಾರೆ ಎಂದರು.

    ಸುಳ್ಳಿನ ಕಂತೆ : ಈಗಿನ ಮುಖ್ಯಮಂತ್ರಿಗಳು ಎಷ್ಟು ಅವಧಿಗೆ ಮುಖ್ಯಮಂತ್ರಿಗಳಾಗಿ ಉಳಿಯಲಿದ್ದಾರೆ ಎಂಬ ಪ್ರಧಾನಿಯವರ ರಾಜಕೀಯ ಭಾಷಣದಲ್ಲಿನ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕೇವಲ ಆರೋಪ ಮಾಡಬೇಕೆಂಬ ಉದ್ದೇಶದಿಂದ ಆರೋಪ ಮಾಡಲಾಗುತ್ತಿದ್ದು, ಇವೆಲ್ಲವೂ ಸುಳ್ಳಿನ ಕಂತೆ ಎಂದರು.


    Provided by
    Provided by

    ಬಿಜೆಪಿಯ ದಿವಾಳಿತನ: ಮಧ್ಯಪ್ರದೇಶದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕರ್ನಾಟಕವನ್ನೇ ಗುರಿ ಮಾಡಿ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ರಾಜ್ಯದಲ್ಲಿ ಇದುವರೆಗೆ ವಿರೋಧಪಕ್ಷದ ನಾಯಕರನ್ನು ಆಯ್ಕೆಮಾಡಿಲ್ಲ. ಇದು ಬಿಜೆಪಿಯ ದಿವಾಳಿಯಾಗಿರುವುದನ್ನು ಸೂಚಿಸುತ್ತದೆ ಎಂದರು.

    ಬರಪರಿಹಾರ ನೀಡಿಲ್ಲ: ಸಿಎಂ ಮತ್ತು ಡಿಸಿಎಂ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಪ್ರಧಾನಮಂತ್ರಿಗಳ ಭಾಷಣದಲ್ಲಿ ಮಾಡಿರುವ ಟೀಕೆಗೆ ಪ್ರತ್ಯುತ್ತರ ನೀಡುತ್ತಾ, 40 ಪರ್ಸೆಂಟ್ ಕಮೀಷನ್ ಸರ್ಕಾರ ಎಂಬ ಆರೋಪ ಬಿಜೆಪಿ ಸರ್ಕಾರದದ ಮೇಲಿತ್ತು. ಈ ಬಗ್ಗೆ ನಮ್ಮ ಸರ್ಕಾರ ತನಿಖೆ ಮಾಡಿಸುತ್ತಿದೆ. ದೇಶದ ಪ್ರಧಾನಿಯಾದವರು ಈ ವಿಷಯದ ಬಗ್ಗೆಯೂ ಮಾತನಾಡಬೇಕಲ್ಲವೇ? ಕೇಂದ್ರ ಸರ್ಕಾರದ ಅಧೀನದಲ್ಲಿ ಎಲ್ಲ ತನಿಖಾ ಸಂಸ್ಥೆಗಳಿವೆ , ಪುರಾವೆಗಳು, ದಾಖಲೆಗಳಿಲ್ಲದೇ ಆರೋಪ ಮಾಡಬಾರದು. ಇಂದು ಇಡೀ ದೇಶವೇ ದಿವಾಳಿಯಾಗಿದೆ. ರಾಜ್ಯದ ವಿರುದ್ಧ ಕೇಂದ್ರ ಮಲತಾಯಿ ಧೋರಣೆಯನ್ನು ತಳೆದಿದೆ. ಬರಗಾಲದ ಪರಿಹಾರವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ ಎಂದು ಪ್ರಧಾನ ಮಂತ್ರಿಗಳು ಹೇಳಿದ್ದರು. ಆದರೆ ನಮ್ಮ ಸರ್ಕಾರ ಅವುಗಳನ್ನು ಸಾಧಿಸಿ ತೋರಿಸಿದೆ. ಇಂತಹ ಹೇಳಿಕೆಗಳನ್ನು ದೇಶದ ಪ್ರಧಾನ ಮಂತ್ರಿಗಳಿಂದ ಅಪೇಕ್ಷಿಸಿರಲಿಲ್ಲ.  ತಮ್ಮ ರಾಜಕೀಯ ಭಾಷಣದಲ್ಲಿ ರಾಜ್ಯದ ಬಗ್ಗೆ ಟೀಕೆಗಳನ್ನು ಮಾಡುವುದು ಪ್ರಧಾನಮಂತ್ರಿಯವರಿಗೆ ಶೋಭೆ ತರುವಂಥದ್ದಲ್ಲ ಎಂದರು.

    ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಉಪಹಾರ ಸಭೆ: ಮುಖ್ಯಮಂತ್ರಿಗಳು, ಶಾಸಕರೊಂದಿಗೆ ನಡೆಸಲಾದ ಉಪಹಾರ ಸಭೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಭೆಯನ್ನು ನಡೆಸಲಾಗಿತ್ತು. ಪ್ರತಿ ಜಿಲ್ಲೆಗೆ ಓರ್ವ ಮಂತ್ರಿಯನ್ನು  ವೀಕ್ಷಕರನ್ನಾಗಿ ನೇಮಿಸಲಾಗಿದೆ. ಬರಗಾಲ ಪರಿಸ್ಥಿತಿ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ ಎಂದರು.

    ಬರಪರಿಹಾರ ಬಿಡುಗಡೆಗೊಳಿಸಲಿ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು  ಸಿಎಂ ಆದವರು ಪ್ರಧಾನಿಯವರನ್ನು ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬರಪರಿಹಾರ ಕೋರಿ ಕೇಂದ್ರಕ್ಕೆ ಮನವಿಯನ್ನು ಈಗಾಗಲೇ ಸಲ್ಲಿಸಲಾಗಿದೆ. ಕುಮಾರಸ್ವಾಮಿಯವರು ಹೇಗಿದ್ದರೂ ಬಿಜೆಪಿಯವರೊಂದಿಗೆ ಸೇರಿದ್ದಾರೆ. ಅವರು ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಿಸಲು ಕೇಂದ್ರದೊಂದಿಗೆ ಮಾತನಾಡಲಿ ಎಂದರು.

    ಹೈಕಮಾಂಡ್ ನಿರ್ಧಾರ: ಲೋಕಸಭೆ ಚುನಾವಣೆಗೂ ಮುಂಚೆ ಅಥವಾ ನಂತರ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂಬ ಯತ್ನಾಳ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಯಿಸಿ, ಇಂತಹ ವಿಚಾರಗಳ ಬಗ್ಗೆ ಪಕ್ಷದ  ಹೈಕಮಾಂಡ್ ನಿರ್ಧರಿಸುತ್ತದೆ. ಇವರಿಗೆ ಮಾತನಾಡುವ ಹಕ್ಕಿಲ್ಲ. ವಿರೋಧಪಕ್ಷ ನಾಯಕರ ಆಯ್ಕೆಯನ್ನೇ ಬಿಜೆಪಿಯವರಿಗೆ ಮಾಡಲು ಸಾಧ್ಯವಾಗಿಲ್ಲ ಎಂದರು.

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ಕೆಂಗೇರಿ: ಉಪನಗರದಲ್ಲಿರುವ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ಕಾಲೇಜಿನಲ್ಲಿ ಮಂಗಳವಾರದಂದು “ಸಶಕ್ತ ಭಾರತಕ್ಕಾಗಿ ಸಮಾನ ಅವಕಾಶಗಳು” ಎಂಬ ವಿಷಯದಡಿ…

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026

    ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.