ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸಿಎಂ, ಡಿಸಿಎಂ ಹಾಗೂ ಮಂತ್ರಿಗಳಿಗೆ ಟಾರ್ಗೆಟ್ ಕೊಟ್ಟಿದ್ದಾರೆ. ಯಾರು ಹೆಚ್ಚಿಗೆ ಹಣ ಕೊಡುತ್ತಾರೆ ಅವರು ಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ.
ಯಾರು ಕೊಡಲ್ಲಾ ಅವರು ಮಂತ್ರಿಗಳಾಗುವುದಿಲ್ಲ. ಹೆಚ್ಚು ಹಣ ಕೊಟ್ಟು ಅವರು ಅಧಿಕಾರದಲ್ಲಿ ಇರುತ್ತಾರೆ. ಯಾವುದೆ ಪವರ್ ಶೇರಿಂಗ್ ಇಲ್ಲ.
ಯಾರು ಹಣ ಕೊಡುತ್ತಾರೆ ಅವರು ಅಧಿಕಾರದಲ್ಲಿ ಇರುತ್ತಾರೆ. ಈಗಾಗಲೇ ಹೈಕಮಾಂಡ್ ಇದನ್ನೇ ಹೇಳಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದರು.


