nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
    ರಾಜ್ಯ ಸುದ್ದಿ November 13, 2023

    ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

    By adminNovember 13, 2023No Comments1 Min Read
    dk shivakumar

    ಬೆಂಗಳೂರು: “ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ತಮ್ಮ ಕ್ಷೇತ್ರ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

    ಕುಮಾರಸ್ವಾಮಿ ಅವರಿಗೂ ಗ್ಯಾರಂಟಿ ಯೋಜನೆಗಳಿಗೂ ಏನು ಸಂಬಂಧ? ಅವರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಏನು ಗೊತ್ತಿದೆ” ಎಂದೂ ಪ್ರಶ್ನಿಸಿದ್ದಾರೆ.

    ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳು ಭಾನುವಾರ, ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುತ್ತಿಲ್ಲ ಎಂಬ ಕುಮಾರಸ್ವಾಮಿ ಆರೋಪ ಬಗ್ಗೆ ಕೇಳಿದಾಗ ಅವರು ತಿರುಗೇಟು ನೀಡಿದ್ದು ಹೀಗೆ; “ಕುಮಾರಸ್ವಾಮಿ ಅವರಿಗೆ ಬಡ ಜನತೆಯ ನೋವು ಗೊತ್ತಿದ್ದರೆ ಮಾತನಾಡುತ್ತಿರಲಿಲ್ಲ. ಅವರೂ ಒಬ್ಬ ನಾಯಕರು, ಆರೋಪ ಮಾಡಲಿ ತೊಂದರೆಯಿಲ್ಲ. ಗ್ಯಾರಂಟಿ ಯೋಜನೆಗಳಿಂದ ಯಾರಿಗೆ ಒಳ್ಳೆಯದಾಗಬೇಕಿತ್ತೊ ಅವರಿಗೆ ಅದು ತಲುಪಿ, ಸಂತೋಷವಾಗಿದ್ದಾರೆ.

    ಕುಮಾರಸ್ವಾಮಿ ಅವರೇನು ಫಲಾನುಭವಿಗಳೂ ಅಲ್ಲ, ಅದರ ಬಗ್ಗೆ ಅವರಿಗೆ ಚಿಂತೆನೆಯೇ ಇಲ್ಲ. ಪಾಪ ಅವರಿಗೆ ಅವರು ಪಂಚರತ್ನ ಯೋಜನೆಗಳನ್ನು ಜಾರಿ ಮಾಡಲು ಅವಕಾಶ ಆಗಲೇ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ತಲುಪಿದೆಯೋ, ಇಲ್ಲವೊ ಎನ್ನುವುದನ್ನು ಅವರು ಮತದಾರರಿಗೆ ಕೇಳಿ ತಿಳಿದುಕೊಳ್ಳಬೇಕು.

    ಚನ್ನಪಟ್ಟಣದ 25 ಕ್ಕೂ ಹೆಚ್ಚು ಮತದಾರರ ಬಳಿ ನಾನೇ ಖುದ್ದಾಗಿ ಮಾತನಾಡಿದ್ದೇನೆ. ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರದ ಮತದಾರರ ಬಳಿ ಹೋಗಿ ಕೇಳಲಿ. ಉಚಿತ ವಿದ್ಯುತ್, ಶಕ್ತಿ, ಅನ್ನ ಭಾಗ್ಯ, ಗೃಹಲಕ್ಷ್ಮೀ ಯೋಜನೆಗಳು ಅವರಿಗೆ ತಲುಪಿದೆಯೆ? ಇಲ್ಲವೇ? ಎಂದು ಪರೀಕ್ಷೆ ಮಾಡಲಿ.

    ಒಂದಷ್ಟು ತಾಂತ್ರಿಕ ದೋಷ ಹಾಗೂ ಇತರೇ ಕಾರಣಗಳಿಂದ ಶೇ 5 ರಷ್ಟು ಫಲಾನುಭವಿಗಳಿಗೆ ಯೋಜನೆ ತಲುಪಿಲ್ಲ. ಈಗ ಒಂದೊಂದೇ ಸಮಸ್ಯೆಗಳನ್ನು ಬಗೆಹರಿಸಿ ತಲುಪಿಸಲಾಗುತ್ತಿದೆ.

    ನಾನು ತೆಲಂಗಾಣದ 5 ಕ್ಷೇತ್ರಗಳ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದೆ. ಆ ಐದೂ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ. ಡಿ. 9  ರಂದು ಕಾಂಗ್ರೆಸ್ ಪಕ್ಷ ತೆಲಂಗಾಣದಲ್ಲಿ ಸರ್ಕಾರ ರಚಿಸಲಿದ್ದು, ಕರ್ನಾಟಕದ ಮಾದರಿಯಂತೆ 6 ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು. ಈ ಕುರಿತು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.”

     


    Provided by
    Provided by
    admin
    • Website

    Related Posts

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಬೆಂಗಳೂರು: ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಹಾಗೂ ಕೆಲಸದ ಒತ್ತಡ ಇಳಿಸಲು ಒತ್ತಾಯಿಸಿ ಲಕ್ಷಾಂತರ ಅಂಗನವಾಡಿ (ಐಸಿಡಿಎಸ್) ಮತ್ತು ಬಿಸಿಯೂಟ…

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.