ಮಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. 20 ವರ್ಷದ ಪ್ರಕೃತಿ ಶೆಟ್ಟಿ ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿನಿ. ಈಕೆ ಮಂಗಳೂರಿನ ಎ.ಜೆ. ಆಸ್ಪತ್ರೆ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದಳು.
ಮುಂಜಾನೆಯೇ ತಾನಿದ್ದ ಮೆಡಿಕಲ್ ಕಾಲೇಜ್ ನ ಹಾಸ್ಟೆಲ್ ನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಹಲವು ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿಟ್ಟಿದ್ದಾಳೆ.
ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ ನಾನು ದಪ್ಪ ಇರೋದ್ರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಅಂತ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ ಎನ್ನಲಾಗಿದೆ. ನಾನು ತುಂಬಾ ದಪ್ಪ ಇದ್ದೀನಿ. ನೋಡೋಕೆ ಚೆನ್ನಾಗಿ ಕಾಣುತ್ತಾ ಇಲ್ಲ ಅಂತ ಬರೆದಿದ್ದಾಳೆ.
ನನಗೆ ಎಂಬಿಬಿಎಸ್ ಮುಗಿಸಬೇಕು ಅಂತಾ ತುಂಬಾ ಆಸೆ ಇತ್ತು. ಅದ್ರೆ ನನ್ನ ಸೌಂದರ್ಯಕ್ಕೆ ದಪ್ಪ ಅನ್ನೋದು ಅಡ್ಡಿಯಾಗಿತ್ತು. ತೂಕ ಇಳಿಸಲು ಸಾಕಷ್ಟು ಪ್ರಯತ್ನ ಪಟ್ಟರೂ ಆಗಲಿಲ್ಲ. ಇದ್ರಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದೇನೆ. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಅಂತ ಡೆತ್ ನೋಟ್‌ನಲ್ಲಿ ಬರೆದಿದ್ದಾಳೆ. ಇನ್ನು ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಕದ್ರಿ ಠಾಣೆ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.


