ಕರ್ನಾಟಕದಲ್ಲಿ ಕಳೆದ 4 ವರ್ಷಗಳಲ್ಲಿ 6,810 ಮಕ್ಕಳು ಅಸಹಜ ಸಾವು ಕಂಡಿದ್ದಾರೆ. 2022ರಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಮಕ್ಕಳು ಅಸಹಜ ಸಾವು ಕಂಡಿದ್ದಾರೆ.
ಬೆಂಗಳೂರಿನಲ್ಲಿ ಹೆಚ್ಚು ಮಕ್ಕಳು ಮೃತಪಟ್ಟಿದ್ದಾರೆ, ನಂತರದ ಸ್ಥಾನಗಳಲ್ಲಿ ಬೆಳಗಾವಿ ಮತ್ತು ತುಮಕೂರು ಜಿಲ್ಲೆಗಳಿವೆ.
ಮೈಸೂರಿನ ಒಡನಾಡಿ ಸೇವಾ ಸಂಸ್ಥೆಗೆ ಮಾಹಿತಿ ಹಕ್ಕು ಕಾಯ್ದೆಯಡಿ ಈ ಮಾಹಿತಿ ದೊರೆತಿದ್ದು, ಬಾಕಿ ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಮೂರಂಕಿಯಷ್ಟಿದೆ. ಬಡತನ, ಅಪೌಷ್ಠಿಕತೆ, ಬಡ್ಡಿ ದಂಧೆ, ಮೊಬೈಲ್ ಗೀಳು ಈ ಸಾವುಗಳಿಗೆ ಪ್ರಮುಖ ಕಾರಣಗಳು.


