ಬೆಂಗಳೂರು: ಬಿಜೆಪಿಯವರು ಕೇವಲ ಸ್ವಾತಂತ್ರ್ಯದ ಫಲಾನುಭವಿಗಳು ಅಷ್ಟೇ. ಸ್ವಾತಂತ್ರ್ಯ ಹೋರಾಟಕ್ಕೆ ಬಿಜೆಪಿಯವರ ಕೊಡುಗೆ ಏನೂ ಇಲ್ಲ.
ಬಿಜೆಪಿಯ ಒಬ್ಬ ನಾಯಕರಾದರೂ ಜೈಲಿಗೆ ಹೋಗಿದ್ದಾರಾ? ನೆಹರು ಟೀಕೆ ಮಾಡುವುದನ್ನೇ ಬಂಡವಾಳ ಮಾಡಿಕೊಂಡಿದ್ದಾರೆ.
ಬಿಜೆಪಿಗರು ಪ್ರಜಾಪ್ರಭುತ್ವ, ಸಂವಿಧಾನಕ್ಕೆ ವಿರೋಧವಾಗಿದ್ದವರು. ನನ್ನ ಪ್ರಕಾರ ದೇಶ ಆಳುವುದಕ್ಕೆ ಬಿಜೆಪಿಗೆ ಅರ್ಹತೆಯೇ ಇಲ್ಲ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.


