ಬೆಂಗಳೂರು: ಐಶಾರಾಮಯ್ಯನವರೇ, ನನ್ನ ದನಿ ಬಡವರ ಪರ. ನಿಮ್ಮಂತೆ ಯಾರ ಮುಲಾಜಿಗೂ ಬಿದ್ದವನಲ್ಲ ನಾನು. ರಾಜ್ಯಕ್ಕೆ ರಾಜ್ಯವೇ ಬರದ ಬೆಂಕಿಯಲ್ಲಿ ಬೇಯುತ್ತಿದೆ. ರೈತಸಂಕುಲ ನರಕದಲ್ಲಿದೆ. ಅವರ ಸಾಲಮನ್ನಾ ಮಾಡಿ. #YstTax, #SstTax ಕಲೆಕ್ಷನ್ ಬದಿಗಿಟ್ಟು ರೈತರ ಪರ ನಿಲ್ಲಿ. ಗ್ಯಾರಂಟಿ ಗ್ಯಾರಂಟಿ ಎನ್ನುತ್ತಿದ್ದೀರಲ್ಲ, ರೈತರ ಬದುಕಿಗೆ ಗ್ಯಾರಂಟಿ ಕೊಡಿ.
ನಾನು ಸಾಲಮನ್ನಾ ಮಾಡಿ ತೋರಿಸಿದ್ದೇನೆ, ಈಗ ನೀವು ಮಾಡಿ. ಬರೀ ಬಾಯಿ ಮಾತೇಕೆ? ಇದೇ ನನ್ನ ಸವಾಲು” ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸವಾಲು ಎಸೆದಿದ್ದಾರೆ.


