ಬೆಂಗಳೂರು: ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಕಳೆದ ಮೂರು ದಿನಗಳಿಂದ ಪಟಾಕಿ ಸಿಡಿತದಿಂದ 60ಕ್ಕೂ ಹೆಚ್ಚು ಜನರ ಕಣ್ಣುಗಳಿಗೆ ಹಾನಿಯಾಗಿವೆ.
ಇದರ ಜೊತೆಗೆ 50 ಮಂದಿಯ ಮೈಕೈಗಳಿಗೆ ಸುಟ್ಟ ಗಾಯಗಳಾಗಿವೆ. ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಯಲ್ಲಿ ಪಟಾಕಿ ಅವಗಢಗಳು ಸಂಭವಿಸಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ನ.12 ರಿಂದ ಪ್ರಾರಂಭವಾಗಿರುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿವಿಧ ಆಸ್ಪತ್ರೆಗಳಲ್ಲಿ 60 ಕ್ಕೂ ಹೆಚ್ಚು ಪಟಾಕಿ ಸಂಬಂಧಿತ ಗಾಯಗಳ ಪ್ರಕರಣಗಳು ವರದಿಯಾಗಿವೆ.


