ಬಳ್ಳಾರಿಯ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ ಕೇಳಿ ಬಂದಿದೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ವಂಚನೆ ದೂರು ದಾಖಲಾಗಿದೆ.
ಹೌದು, ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಿಸಿಕೊಂಡು ಇದೀಗ ಮೋಸ ಮಾಡಿದ್ದಾರೆ ಎಂದು ಬೆಂಗಳೂರು ಮೂಲದ ಯುವತಿ ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.


