ಉತ್ತರ ಪ್ರದೇಶದ ಕಾನ್ಸುರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಹತ್ತನೇ ತರಗತಿ ಓದುತ್ತಿರುವ ಬಾಲಕನನ್ನು ಶಿಕ್ಷಕಿ ಪ್ರೀತಿಸುತ್ತಿದ್ದಳು ಎಂದು ಬಾಲಕನ ತಂದೆ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಶಿಕ್ಷಕಿ ತನ್ನ ಮಗನೊಂದಿಗೆ ಲೈಂಗಿಕ ಕ್ರಿಯೆ ನಡೆಸಿ, ಮತಾಂತರ ಮಾಡಲು ಯತ್ನಿಸುತ್ತಿದ್ದಾಳೆ. ಈ ಕುರಿತು ಶಾಲಾ ಆಡಳಿತ ಮಂಡಳಿಗೆ ದೂರು ನೀಡಿದರೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಬಾಲಕನ ತಂದೆ ಆಕ್ರೋಶ ವ್ಯಕ್ತಪಡಿಸಿದರು.
ನ್ಯಾಯಾಲಯದ ಆದೇಶದಂತೆ ಪೊಲೀಸರು ಶಿಕ್ಷಕಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.


