ವಿಪಕ್ಷ ನಾಯಕನ ಆಯ್ಕೆಯ ಶಾಸಕಾಂಗ ಸಭೆಗೆ ಶಾಸಕ ಯತ್ನಾಳ್, ರಮೇಶ್ ಜಾರಕಿಹೊಳಿ ಆಗಮಿಸಿಲ್ಲ. ಈ ಕುರಿತು ಪ್ರತಿಕ್ರಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಸಭೆಗೆ ಆಗಮಿಸಿಲ್ಲ ಅಷ್ಟೇ, ಆದರೆ ಕೇಂದ್ರದಿಂದ ಬಂದ ವೀಕ್ಷಕರಿಗೆ ವಿಪಕ್ಷ ನಾಯಕ ಯಾರಾಗಬೇಕು ಎಂಬ ಅಭಿಪ್ರಾಯ ತಿಳಿಸಿ ಹೋಗಿದ್ದರು ಎಂದು ಹೇಳಿದ್ದಾರೆ.
ಶಾಸಕ ಯತ್ನಾಳ್, ವಿಪಕ್ಷ ಸ್ಥಾನವನ್ನು ಉತ್ತರ ಕರ್ನಾಟಕದ ಶಾಸಕರಿಗೆ ನೀಡಬೇಕು ಎಂದು ಬಹಿರಂಗವಾಗಿ ಹೇಳಿದ್ದರು.


