nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾನು ವಿದ್ಯಾರ್ಥಿಯಾಗಿದ್ದಾಗ ಶಿಕ್ಷಣದ ಕಡೆ ಹೆಚ್ಚು ಗಮನ ಕೊಡಲಿಲ್ಲ: ಡಿ.ಕೆ. ಶಿವಕುಮಾರ್
    ರಾಜ್ಯ ಸುದ್ದಿ November 22, 2023

    ನಾನು ವಿದ್ಯಾರ್ಥಿಯಾಗಿದ್ದಾಗ ಶಿಕ್ಷಣದ ಕಡೆ ಹೆಚ್ಚು ಗಮನ ಕೊಡಲಿಲ್ಲ: ಡಿ.ಕೆ. ಶಿವಕುಮಾರ್

    By adminNovember 22, 2023No Comments3 Mins Read
    dk shivakumar

    ನಾನು ವಿದ್ಯಾರ್ಥಿಯಾಗಿದ್ದಾಗ ಶಿಕ್ಷಣದ ಕಡೆ ಹೆಚ್ಚು ಗಮನ ಕೊಡಲಿಲ್ಲ. ನನ್ನ 48ನೇ ವಯಸ್ಸಿಗೆ ನಾನು ಪದವೀಧರನಾದೆ. ಮಂತ್ರಿಯಾಗಿದಕ್ಕಿಂತ ನನಗೆ ಪದವೀಧರನಾದಾಗ ಹೆಚ್ಚು ಸಂತೋಷವಾಯಿತು.

    ನೀವುಗಳು ರಾಷ್ಟ್ರ ಮಟ್ಟದಲ್ಲಿ ಅಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವವರು. ಕೆಲವು ಶಾಲೆಗಳಲ್ಲಿ ಕೇವಲ ಹೆಚ್ಚು ಅಂಕಗಳಿಸಿದವರನ್ನು ಮಾತ್ರ ಸೇರಿಸಿಕೊಳ್ಳುತ್ತಾರೆ. ಆದರೆ ಇಲ್ಲಿ ಎಲ್ಲರನ್ನು ಸೇರಿಸಿಕೊಳ್ಳುತ್ತಾರೆ. ಕುದುರೆಯನ್ನು ರೇಸ್ ನಲ್ಲಿ ಓಡುವಂತೆ ಮಾಡುವುದಲ್ಲ, ಕತ್ತೆಯನ್ನು ರೇಸ್ ನಲ್ಲಿ ಓಡುವಂತೆ ಮಾಡುವುದು ನಿಜವಾದ ಶಿಕ್ಷಣ. ಈ ಸಂಸ್ಥೆ ಈ ಪ್ರಯತ್ನ ಮಾಡುತ್ತಿದೆ.

    ನಾನು ಈ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಲ್ಲಿ ಒಂದು ಮನವಿ ಇದೆ. ಈ ಕಾರ್ಯಕ್ರಮ ಸ್ವಾಗತ, ಪರಿಚಯವನ್ನು ಶಿಕ್ಷಕರ ಬದಲಿಗೆ ಮಕ್ಕಳಿಂದ ಮಾಡಿಸಿ. ಅವರು ಭವಿಷ್ಯದ ನಾಯಕರು. ನಾಯಕನಾದವನು ಮತ್ತೊಬ್ಬ ನಾಯಕನನ್ನು ತಯಾರು ಮಾಡಬೇಕು. ನಮ್ಮ ಮಕ್ಕಳಲ್ಲಿ ಪ್ರತಿಭೆ ಇದೆ.

    ಈ ಹಿಂದೆ ಇದ್ದ ಗುರು ಶಿಷ್ಯರ ಸಂಬಂಧವೇ ಬೇರೆ, ಈಗಿರುವ ಗುರು ಶಿಷ್ಯರ ಸಂಬಂಧವೇ ಬೇರೆ. “ತ್ರೇತದೊಳ ಗುರುವು ಶಿಷ್ಯಗೆ ಜಂಗಿಸಿ ವಿದ್ಯೆ ಕಲಿಸಿ ಮಹಾಪ್ರಸಾದಂಗೆ, ದ್ವಾಪರದೊಳ್ ಗುರುವು ಶಿಷ್ಯಗೆ ದಂಡಿಸಿ ವಿದ್ಯೆ ಕಲಿಸಿ ಮಹಾಪ್ರಸಾದಂಗೆ, ಆದರೆ ಕಲಿಯುಗದೊಳ್ ಗುರುವು ಶಿಷ್ಯಂಗೆ ವಂದಿಸಿ ವಿದ್ಯೆ ಕಲಿಸಿ ಮಹಾಪ್ರಸಾದಂಗೆ” ಎಂಬ ಮಾತಿದೆ.

    ಅಂದರೆ, ತ್ರೇತಾಯುಗದಲ್ಲಿ ಗುರುಗಳು ಶಿಷ್ಯರನ್ನು ಚಚ್ಚಿ ಪಾಠ ಕಲಿಸಿದರೂ ಅದನ್ನು ಪ್ರಸಾದವೆಂದು ಸ್ವೀಕಾರ ಮಾಡುತ್ತಿದ್ದರು. ದ್ವಾಪರ ಯುಗದಲ್ಲಿ ಗುರುಗಳು ದಂಡಿಸಿದರೆ ಅದನ್ನೇ ಮಹಾಪ್ರಸಾದವೆಂದು ಸ್ವೀಕರಿಸುತ್ತಿದ್ದರು. ಆದರೆ ಈಗ ಕಲಿಯುಗದಲ್ಲಿ ಗುರುಗಳು ವಿದ್ಯಾರ್ಥಿಗಳಿಗೆ ಮನವಿ ಮಾಡಿ ಕಲಿಸಬೇಕಾದ ಪರಿಸ್ಥಿತಿ ಇದೆ. ನಾವು ಈ ಸಂದರ್ಭದಲ್ಲಿ ಇದ್ದೇವೆ.

    ಶಾಲೆಯಲ್ಲಿ ವಿದ್ಯೆ ಕಲಿಸುವವರು ಮಾತ್ರ ಶಿಕ್ಷಕರಲ್ಲ. ನಮ್ಮ ತಪ್ಪುಗಳನ್ನು ಗುರುತಿಸಿ ಬುದ್ಧಿ ಹೇಳುವವರು ಶಿಕ್ಷಕರು. ಹೀಗಾಗಿ ನಮಗೆ ಸಹಾಯ ಮಾಡುವವರನ್ನು ನಾವು ಮರೆಯಬಾರದು. ನಾವು ನಮ್ಮ ಮೂಲ ಮರೆತರೆ ಯಶಸ್ಸು ಸಾಧಿಸಲು ಆಗುವುದಿಲ್ಲ. ತಾಯಿಯೆ ನಮಗೆ ಮೊದಲ ಗುರು. ಹೀಗಾಗಿ ನಾವು ಸದಾ ಅವಳನ್ನು ನೆನೆಯುತ್ತೇವೆ. ಅಮ್ಮನ ನೆನಪು ಪ್ರೀತಿಯ ಮೂಲ, ಗುರುವಿನ ನೆನಪು ಜ್ಞಾನದ ಮೂಲ, ದೇವರ ನೆನಪು ಭಕ್ತಿಯ ಮೂಲ, ಈ ಮೂರರ ನೆನಪು ಮನುಷ್ಯತ್ವಕ್ಕೆ ಮೂಲ, ಮನುಷ್ಯತ್ವ ಮೋಕ್ಷಕ್ಕೆ ಮೂಲ. ಅದರಂತೆ ನೀವು ಇವರನ್ನು ನೆನೆದು ಬದುಕಬೇಕು.

    ಇಲ್ಲಿ ಅನೇಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಿದ್ದಾರೆ. ನಾನು ಕೂಡ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದೇನೆ. “By Birth I am an Agriculturist, By Profession I am a Businessman, By Choice I am an Educationist, By Passion I am a Politician, ಕಳೆದ ನಾಲ್ಕೈದು ವರ್ಷಗಳಿಂದ ನಾನು ನಡೆಸುತ್ತಿರುವ ಶಿಕ್ಷಣ ಸಂಸ್ಥೆ ಗೆ ನಾನು ಹೋಗಲು ಆಗಿಲ್ಲ. ನಿಮ್ಮ ಅಧ್ಯಕ್ಷರು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದಾಗ ನಾನು ಸಂತೋಷದಿಂದ ಒಪ್ಪಿ ನಿಮ್ಮನ್ನು ನೋಡಲು ಬಂದಿದ್ದೇನೆ.

    ಇಲ್ಲಿ ನನ್ನಿಂದ ದೀಪ ಹಚ್ಚಿಸಲಾಗಿದೆ. ನಮಗೆ ದೀಪದ ಬೆಳಕು ಕಾಣುತ್ತಿದೆ. “ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನ ಸಂಪದಂ. ಜ್ಞಾನಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತಂ!”” ಎಂಬ ಶ್ಲೋಕದಂತೆ ನಿಮಗೆ ಮಂಗಳವಾಗಲಿ. ವಿದ್ಯೆ, ಜ್ಞಾನ, ಆರೋಗ್ಯ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸಿ ಈ ದೀಪ ಬೆಳಗಿಸಿದ್ದೇವೆ.

    ತೇಜಸ್ವಿ ಸೂರ್ಯ ಅವರು ಮಾತನಾಡುತ್ತಾ ಈಗಿನ ಕಟುಸತ್ಯ ಹಾಗೂ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ನಿಮ್ಮನ್ನು ಹೇಗೆ ತಯಾರು ಮಾಡಬೇಕು ಎಂಬ ವಿಚಾರ ಪ್ರಸ್ತಾಪಿಸಿದರು. ನಿಮ್ಮ ಕೈಗೆ ಮೊಬೈಲ್ ಮತ್ತು ಇಂಟರ್ ನೆಟ್ ಸಿಕ್ಕಿದ್ದು, ನಿಮ್ಮ ಶಿಕ್ಷಕರಿಗೆ ನೀವು ಪಾಠ ಮಾಡುವ ಶಕ್ತಿ ಬಂದಿದೆ.

    ಕೃಷ್ಣ ಅವರ ಕಾಲದಲ್ಲಿ ಸಚಿವನಾಗಿದ್ದಾಗ, ಪ್ಯಾರೀಸ್ ನಲ್ಲಿ ಸಮಾವೇಶಕ್ಕೆ ಅತಿಥಿಯಾಗಿ ಹೋಗಿದ್ದೆ. ಅಂದು ನನ್ನ ಹುಟ್ಟುಹಬ್ಬದ ದಿನವಾಗಿತ್ತು. ಅದನ್ನು ತಿಳಿದ ಅವರು ವೇದಿಕೆ ಮೇಲೆ ಕರೆದು ಕೇಕ್ ಕತ್ತರಿಸಲು ಹೇಳಿದರು. ಈ ಸಂದರ್ಭದಲ್ಲಿ ಮೇಣದಬತ್ತಿ ಆರಿಸಲು ಹೇಳಿದರು. ಆಗ ಆ ಸಮಾವೇಶದಲ್ಲಿದ್ದ ವ್ಯಕ್ತಿಯೊಬ್ಬ ಆತ ಭಾರತದಿಂದ ಬಂದಿದ್ದು, ಭಾರತೀಯರ ಸಂಸ್ಕೃತಿ ದೀಪ ಬೆಳಗುವುದೇ ಹೊರತು ದೀಪ ಆರಿಸುವುದಲ್ಲ ಎಂದು ಹೇಳಿದರು.

    ಈ ರೀತಿ ದೀಪ ಬೆಳಗುವುದು ನಮ್ಮ ದೇಶದ ಸಂಸ್ಕೃತಿ. ನಿಮ್ಮ ಮನೆಯಲ್ಲಿ ಹುಟ್ಟುಹಬ್ಬ ಆಚರಿಸುವಾಗಲೂ ಈ ದೇಶದ ಆಸ್ತಿಯಾದ ನಮ್ಮ ಸಂಸ್ಕೃತಿಯನ್ನು ಬೆಳೆಸಿಕೊಂಡು ಹೋಗಿ ಎಂದು ಮನವಿ ಮಾಡುತ್ತೇವೆ. ನಾವು ದೀಪ ಹಚ್ಚಿದಾಗ ಕೇವಲ ಬೆಳಕು ಕಾಣುತ್ತದೆ. ಅದರಲ್ಲಿ ಉರಿಯುವ ಬತ್ತಿಯಾಗಲಿ, ಎಣ್ಣೆಯಾಗಲಿ ಕಾಣುವುದಿಲ್ಲ.  ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ನಿಮ್ಮ ಶಿಕ್ಷಕರು ಹಾಗೂ ಪೋಷಕರ ಶ್ರಮವನ್ನು ಗಮನದಲ್ಲಿಟ್ಟುಕೊಳ್ಳಿ. ನೀವು ಭವಿಷ್ಯದಲ್ಲಿ ದೊಡ್ಡ ನಾಯಕರಾಗಿ ಬೆಳೆಯಬೇಕು.

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾರಂಗ ಎಂಬ ಆಧಆರಸ್ತಂಭಗಳಿವೆ. ಅದೇ ರೀತಿ ನಮ್ಮ ಸಮಾಜದಲ್ಲಿ ಕೃಷಿಕ, ಶಿಕ್ಷಕ, ಸೈನಿಕ ಹಾಗೂ ಶ್ರಮಿಕ ಬಹಳ ಮುಖ್ಯವಾದ ಅಂಗಗಳು. ನೀವು ನಿಮ್ಮ ಜೀವನದಲ್ಲಿ ನಾಲ್ಕು ಡಿ ಗಳನ್ನು ಅಳವಡಿಸಿಕೊಳ್ಳಬೇಕು. ನೀವು ಕನಸು ಕಾಣಬೇಕು (Dream), ಕನಸು ಸಾಕಾರಗೊಳಿಸಲು ಆಸೆ (Desire)ಪಡಬೇಕು. ಆ ಕನಸಿಗಾಗಿ ಬದ್ಧತೆ (Dedicate) ಇರಬೇಕು. ಆ ಕನಸಿನ ಸಾಕಾರಕ್ಕೆ ಶಿಸ್ತು (Discipline) ಹೊಂದಿರಬೇಕು. ಆಗ ನೀವು ದೇಶಕ್ಕೆ ಆಸ್ತಿಯಾಗಿ ಬೆಳೆಯಲು ಸಾಧ್ಯ.

    ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯಾ, ಪದುಮನಾಭನ ಪಾದ ಭಜನೆ ಪರಮಸುಖವಯ್ಯಾ ಎಂಬ ಪುರಂದರ ದಾಸರ ಕೀರ್ತನೆಯಂತೆ ನಿಮ್ಮಂತಹ ಮಕ್ಕಳ ಭೇಟಿ ಮಾಡುವ ಅವಕಾಶ ಸಿಕ್ಕಿದ್ದೆ ನನ್ನ ಭಾಗ್ಯ.


    Provided by
    Provided by
    admin
    • Website

    Related Posts

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಬೆಂಗಳೂರು: ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಹಾಗೂ ಕೆಲಸದ ಒತ್ತಡ ಇಳಿಸಲು ಒತ್ತಾಯಿಸಿ ಲಕ್ಷಾಂತರ ಅಂಗನವಾಡಿ (ಐಸಿಡಿಎಸ್) ಮತ್ತು ಬಿಸಿಯೂಟ…

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.