ಒಂದು ವೇಳೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳು ಬಂದ್ ಆಗುವ ಸಾಧ್ಯತೆ ಹೆಚ್ಚಿವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಇಂದಿರಾ ಗಾಂಧಿ ಅವರ ಜನ್ಮದಿನ ಆಚರಣೆ ವೇಳೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲ್ಲ.
ಆದರೆ, ನಮ್ಮ ಯೋಜನೆಗಳನ್ನು ವಿರೋಧಿಸುತ್ತಿರುವ ಬಿಜೆಪಿ, ಜೆಡಿಎಸ್ ಅಧಿಕಾರಕ್ಕೆ ಬಂದರೆ ಯಾವುದಾದರು ಕಾನೂನು ತಂದು ಗ್ಯಾರಂಟಿ ಯೋಜನೆಗಳಿಗೆ ಸಮಸ್ಯೆ ಮಾಡಬಹುದು ಎಂದಿದ್ದಾರೆ.


