nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಲಿ (ಜೆ) ಗ್ರಾಮದಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

    May 2, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಮೇ 3ರಿಂದ ತುಮಕೂರು ಓಪನ್ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್

    May 2, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಲಿ (ಜೆ) ಗ್ರಾಮದಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
    • ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್
    • ಮೇ 3ರಿಂದ ತುಮಕೂರು ಓಪನ್ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್
    • ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ
    • ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ
    • ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್
    • ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ
    • ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುಳ್ಳುಸುದ್ದಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಲು ಗೃಹಸಚಿವ ಪರಮೇಶ್ವರ್ ಸೂಚನೆ
    ರಾಜ್ಯ ಸುದ್ದಿ November 22, 2023

    ಸುಳ್ಳುಸುದ್ದಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಲು ಗೃಹಸಚಿವ ಪರಮೇಶ್ವರ್ ಸೂಚನೆ

    By adminNovember 22, 2023No Comments2 Mins Read
    parameshwar

    ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಸುಳ್ಳುಸುದ್ದಿಗಳು, ಪ್ರಚೋದನಾಕಾರಿ ಹೇಳಿಕೆ ಅಥವಾ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿರುವುದು ಕಂಡುಬಂದರೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹಸಚಿವ ಜಿ.ಪರಮೇಶ್ವರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

    ನಗರದ ಪೊಲೀಸ್ ಆಯುಕ್ತಾಲಯಕ್ಕೆ ಸೋಮವಾರ(ನ.20) ಭೇಟಿ ನೀಡಿದ ಅವರು, ಸಾಮಾಜಿಕ ಜಾಲತಾಣ ನಿಗಾ ಘಟಕ, ನಿಯಂತ್ರಣ ಕೊಠಡಿಗಳನ್ನು ಖುದ್ದಾಗಿ ವೀಕ್ಷಿಸಿ ಸಲಹೆ-ಸೂಚನೆಗಳನ್ನು ನೀಡಿದರು.


    Provided by
    Provided by

    ಸಾಮಾಜಿಕ ಜಾಲತಾಣಗಳ ನಿಗಾ ಘಟಕಕ್ಕೆ ಭೇಟಿ ನೀಡಿದ ಅವರು, ಆಕ್ಷೇಪಾರ್ಹ ಮಾಹಿತಿ, ಸುಳ್ಳುಸುದ್ದಿಗಳು ಬಂದಾಗ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಸೂಕ್ತ ತಾಂತ್ರಿಕ ತರಬೇತಿ ಹೊಂದಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲು ಸೂಚನೆ ನೀಡಿದರು.

    ಇದಾದ ಬಳಿಕ ನಗರ ನಿಯಂತ್ರಣ ಕೊಠಡಿಯನ್ನು ಹಾಗೂ ವೈರ್ ಲೆಸ್ ವಿಭಾಗದ ಕಾರ್ಯಚಟುವಟಿಕೆಗಳನ್ನು ಹಾಗೂ ದಾಖಲೆ ಕೊಠಡಿಯನ್ನು ಖುದ್ದಾಗಿ ವೀಕ್ಷಿಸಿದರು. ನಿಯಂತ್ರಣ ಕೊಠಡಿಗೆ ಬರುವ ಕರೆಗಳು ಹಾಗೂ ಮಾಹಿತಿಯ ಲಾಗ್ ಪುಸ್ತಕವನ್ನು ಪರಿಶೀಲಿಸಿದರಲ್ಲದೇ ಪ್ರತಿಯೊಂದು ದಾಖಲೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

    ಸಂಚಾರ ನಿಯಮ ಉಲ್ಲಂಘನೆ ಕ್ರಮಕ್ಕೆ ನಿರ್ದೇಶನ:

    ಸಂಚಾರ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ಕಟ್ಟಲು ಏಳು ದಿನಗಳ ಕಾಲಾವಕಾಶ ನೀಡಬೇಕು. ಇದಾದ ಬಳಿಕ ನ್ಯಾಯಾಲಯದಿಂದ ಸಮನ್ಸ್ ಹೋಗಬೇಕು; ದಂಡ ಕಟ್ಟದಿದ್ದರೆ ಅಥವಾ ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ವಾಹನ ಸೀಜ್ ಮಾಡಬೇಕು ಎಂದು ಗೃಹ ಸಚಿವ ಪರಮೇಶ್ವರ್ ನಿರ್ದೇಶನ ನೀಡಿದರು. ಸಂಚಾರ ನಿಯಮ ಉಲ್ಲಂಘನೆ ದಂಡ ವಿಧಿಸುವ ವಿಧಾನ, ಚಲನ್ ಜನರೇಟ್ ಮಾಡುವ ವಿಧಾನವನ್ನು ಪರಿಶೀಲಿಸಿದರು.

    ಸಿಸಿಟಿವಿ ದೃಶ್ಯಾವಳಿ ವೀಕ್ಷಣೆ:

    ಬೆಳಗಾವಿ ನಗರದ ವಿವಿಧ ವೃತ್ತಗಳು ಹಾಗೂ ರಸ್ತೆಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಗೃಹಸಚಿವ ಜಿ.ಪರಮೇಶ್ಚರ ವೀಕ್ಷಿಸಿದರು. ಸಿಸಿಟಿವಿ ಮೇಲೆ ನಿಗಾವಹಿಸಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪ್ರತಿಯೊಂದು ಕ್ಯಾಮೆರಾ ಅಳವಡಿಸಿರುವ ವೃತ್ತ ಮತ್ತು ರಸ್ತೆ ಕುರಿತು ಸಂಪೂರ್ಣ ಮಾಹಿತಿ ಇರಬೇಕು. ಇದಲ್ಲದೇ ಸ್ಮಾರ್ಟ್ ಸಿಟಿ ಯೋಜನೆಯಡಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳ ಮೇಲೆ ಕೂಡ ನಿಗಾವಹಿಸಬೇಕು ಎಂದು ಸೂಚನೆ ನೀಡಿದರು.

    ಪೊಲಿಸ್ ಆಯುಕ್ತರಾದ ಎಸ್.ಎನ್.ಸಿದ್ದರಾಮಪ್ಪ ಅವರು, ವಿವಿಧ ಘಟಕಗಳ ಕಾರ್ಯನಿರ್ವಹಣೆ ಕುರಿತು ವಿವರಿಸಿದರು. ಸಾಮಾಜಿಕ ಜಾಲತಾಣ ನಿಗಾ ಘಟಕವು ಕ್ರಿಯಾಶೀಲವಾಗಿದ್ದು, ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿಗಾವಹಿಸಲಾಗಿದೆ. ಇತ್ತೀಚೆಗೆ ಪ್ರಕರಣಗಳನ್ನು ಕೂಡ ದಾಖಲಿಸಲಾಗಿದೆ ಎಂದರು.

    ಇದಲ್ಲದೇ ಅಧಿವೇಶನ ಸಂದರ್ಭದಲ್ಲೂ ಯಾವುದೇ ರೀತಿಯ ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ತೀವ್ರ ನಿಗಾ ವಹಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರಾದ ಸಿದ್ದರಾಮಪ್ಪ ತಿಳಿಸಿದರು.

    ನಗರದಲ್ಲಿ ಯಾವುದೇ ರೀತಿಯ ಆಕ್ಷೇಪಾರ್ಹ ಪೋಸ್ಟ್ ಗಳು, ಕೋಮುಭಾವನೆ ಕೆರಳಿಸುವ ಪೋಸ್ಟ್, ಪ್ರಚೋದಾತ್ಮಕ ಹೇಳಿಕೆ, ಘಟನೆಗಳು ಕಂಡುಬಂದರೆ ಕೂಡಲೇ ಐಟಿ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಡಿಸಿಪಿ ರೋಹನ್ ಜಗದೀಶ್ ವಿವರಿಸಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಅಧೀಕ್ಷಕ ಡಾ. ರವೀಂದ್ರ ಗಡಾದಿ, ಬೆಳಗಾವಿ ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಸ್ನೇಹಾ ಸೇರಿದಂತೆ ಪೊಲೀಸ್ ಆಯುಕ್ತಾಲಯದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

     

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಲಿ (ಜೆ) ಗ್ರಾಮದಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

    May 2, 2026

    ಔರಾದ್: ತಾಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಭಕ್ತಿ…

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಮೇ 3ರಿಂದ ತುಮಕೂರು ಓಪನ್ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್

    May 2, 2026

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.