ರಾಜ್ಯದ ಮೀನುಗಾರಿಕಾ ಸಚಿವರಾದ ಮಂಕಾಳ ವೈದ್ಯ ಅವರು ಸರ್ಕಾರದ ಸಹಕಾರ ಪಡೆದು ಸಮುದಾಯದವರಿಗೆ ಸಾಕಷ್ಟು ಸೌಲಭ್ಯಗಳನ್ನು ತಲುಪಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬರೀ ಸಮುದ್ರದಲ್ಲೇ ಮೀನುಗಾರಿಕೆ ಮಾಡುವುದಕ್ಕಿಂತ ಸಿಹಿ ನೀರಿನ ಮೀನುಗಾರಿಕೆ ಮಾಡಲು ಸಮುದಾಯದವರು ಮುಂದಾಗಬೇಕು. ರಾಜ್ಯ ಸರ್ಕಾರ ಈಗಾಗಲೇ ಏತ ನೀರಾವರಿ ಮೂಲಕ ಸಾಕಷ್ಟು ಕೆರೆಗಳನ್ನು ತುಂಬಿಸಿದ್ದು ಹರಾಜಿನ ಮೂಲಕ ಹಂಚಿಕೆ ಮಾಡಲಾಗುವುದು ಎಂದರು.
ಎಳೆಯ ಪ್ರಾಯದಲ್ಲಿ ನಾನು ಕೂಡ ನಮ್ಮೂರಿನ ಬಳಿಯ ಸಂಗಮದಲ್ಲಿ ಮೀನು ಹಿಡಿಯಲು ಹೋಗುತ್ತಿದ್ದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗಾಳ ಹಾಕಿ ತಾಸುಗಟ್ಟಲೆ ಕುಳಿತುಕೊಳ್ಳಲು ತಾಳ್ಮೆ ಬೇಕು.
ಮಹಶೀರ್ ಮೀನು ಹಿಡಿದು ಕೆರೆಯಲ್ಲಿ ವಾಪಸ್ ಬಿಡಲು ಆಗ ಹೊರದೇಶದಿಂದಲೂ ಬರುತ್ತಿದ್ದರು. ಮೀನುಗಾರಿಕಾ ಸಮುದಾಯದವರೂ ಕೂಡ ಉತ್ತಮ ತಳಿಗಳನ್ನು ತಂದು ಸಾಕಿ ಲಾಭ ಮಾಡಬೇಕು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.


