ಬೆಂಗಳೂರಿನ ಅರಕೆರೆಯಲ್ಲಿ ಶ್ರೀ ಮಾರಿಯಮ್ಮ ದೇವಿಯ ಊರಹಬ್ಬ ಕಾರ್ಯಕ್ರಮ ನಡೆಯಿತು. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಅರಕೆರೆಯ ಶ್ರೀ ಮಾರಿಯಮ್ಮ ದೇವಿಯ ಊರಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಸತೀಶ್ ರೆಡ್ಡಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಸರ್ವರಿಗೂ ದೇವಿಯ ಅನುಗ್ರಹ ದೊರೆಯಲಿ ಎಂದು ಪ್ರಾರ್ಥಿಸಲಾಯಿತು ಎಂದರು. ಈ ಸಂದರ್ಭದಲ್ಲಿ ಮಾಜಿ ನಗರಸಭಾ ಸದಸ್ಯರಾದ ಮುರಳಿ, ಗ್ರಾಮದ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಅರಕೆರೆಯ ವಾರ್ಡ-193 ರ ಬಿಬಿಎಂಪಿ ಅರಕೆರೆ ಉಪವಿಭಾಗದ ಕಚೇರಿಯಲ್ಲಿ ಅರಕೆರೆ ಮೈಕೋ ಲೇಔಟ್ ನಿವಾಸಿಗಳ ಜನಸಂಪರ್ಕ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಸ್ಥಳೀಯ ನಿವಾಸಿಗಳು ಎದುರಿಸುತ್ತಿರುವ ಕುಂದುಕೊರತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕ ಸತೀಶ್ ರೆಡ್ಡಿ ಸೂಕ್ತವಾದ ಪರಿಹಾರ ಒದಗಿಸುವಂತೆ ಸೂಚಿಸಿದರು. ಈ ವೇಳೆ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಪುರುಷೋತ್ತಮ್ ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.


