ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದಾಗಿನಿಂದ ನವೆಂಬರ್ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ ಎಂದರು. ತಿಂಗಳ ಸರಾಸರಿ ಪ್ರಯಾಣಿಕರ ಸಂಖ್ಯೆ ಏಪ್ರಿಲ್ 2023 ರಲ್ಲಿ 84.17 ಲಕ್ಷ ಇದ್ದು, ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ಹೆಚ್ಚಳವಾಗಿದೆ ಎಂದು ಮಾಹಿತಿ ನೀಡಿದರು.
ಕರ್ನಾಟಕದಲ್ಲಿ ಬಸ್ ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್ ಚಾಲಿತ ಬಸ್ ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ ಎಂದು ಹೇಳಿದರು. ಇದೇ ವೇಳೆ ಬಸ್ ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.


