ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವ ನಗರದ ನಿವಾಸಕ್ಕೆ ಮಾಜಿ ಸಚಿವ ಬಿ. ಶ್ರೀರಾಮುಲು ಭೇಟಿ ನೀಡಿದ್ದರು. ಸುದ್ದಿಗಾರರ ಜೊತೆ ಮಾತನಾಡಿದ ಶ್ರೀರಾಮುಲು ಅವರು, ಈ ಭೇಟಿ ಯಾವುದೇ ರಾಜಕೀಯ ಕಾರಣಕ್ಕಲ್ಲ.
ಮಗಳ ಮದುವೆ ಸಮಾರಂಭ ನಿಮಿತ್ತ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ಬಂದಿದ್ದೇನೆ. ಇದು ಖಾಸಗಿ ಭೇಟಿ ಎಂದು ಸ್ಪಷ್ಟಪಡಿಸಿದರು.
ಇನ್ನೂ ಮುಂದಿನ ತಿಂಗಳು ಡಿಸೆಂಬರ್ 7ರಂದು ಮಗಳ ಮದುವೆ ಇದೆ. ಬೆಂಗಳೂರು ಅರಮನೆ ಮೈದಾನದಲ್ಲಿ ಮದುವೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.


