ಗುಜರಾತಿನಲ್ಲಿ ಸಿಡಿಲು ಬಡಿದು 20 ಮಂದಿ ಬಲಿ ಭಾನುವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದಲ್ಲಿ ಹಲವಾರು ಹಾನಿಗಳು ವರದಿಯಾಗಿವೆ. ಘಟನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ.
ಸೂರತ್, ಸುರೇಂದ್ರನಗರ, ಖೇಡಾ, ತಾಪಿ, ಬಹರುಚ್ ಮತ್ತು ಅಮ್ರೇಲಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಗುಜರಾತ್‌ನ 252 ತಾಲ್ಲೂಕುಗಳಲ್ಲಿ 234 ಭಾರಿ ಮಳೆಯಾಗಿದೆ. ರಾಜ್ಯದಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.


