ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ ಅಧ್ಯಾಯ 1 ಫಸ್ಟ್ ಲುಕ್ ರಿಲೀಸ್ ಆಗಿದೆ. ಹೊಂಬಾಳೆ ಫಿಲ್ಮಸ್ ಲಾಂಛನದಲ್ಲಿ ಮೂಡಿ ಬರಲಿರುವ ಚಿತ್ರದ ಫಸ್ಟ್ ಲುಕ್ ಸಖತ್ ಕ್ಯೂರಿಯಾಸಿಟಿ ಮೂಡಿಸಿದೆ. ಅಘೋರಿ ಅವತಾರದಲ್ಲಿ ರಿಷಬ್ ಅಚ್ಚರಿ ಮೂಡಿಸುವಷ್ಟು ಕಂಡಿದ್ದಾರೆ. ಶಿವನ ಅವತಾರದ ಮತ್ತೊಂದು ರೂಪವಾಗಿ ರಿಷಬ್ ಬದಲಾಗಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ ಮತ್ತೊಂದು ಕೈಯಲ್ಲಿ ಜಮದಗ್ನಿ ಕೊಡಲಿಯನ್ನು ಹಿಡಿದುಕೊಂಡಿರುವ ಪೋಸ್ಟರ್ ನಾನಾ ಚರ್ಚೆಗಳನ್ನು ಹುಟ್ಟು ಹಾಕುವಂತಿದೆ.
ಕಾಂತಾರ ಚಿತ್ರದ ಮೊದಲ ಅಧ್ಯಾಯಕ್ಕೆ ಇಂದು ಮುಹೂರ್ತ ನಡೆದಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಿತ್ರತಂಡ ವಿಶೇಷ ಪೂಜೆಯನ್ನ ಮಾಡಿಸಲಿದೆ.
ಉದ್ಭವಮೂರ್ತಿ ವಿನಾಯಕ ದೇವರಿಗೆ ಮೂಡು ಗಣಪತಿ ಸೇವೆ, ತ್ರಿಕಾಲ ಸೇವೆ, ಅನ್ನದಾನ ನಡೆಯಲಿದೆ. ದೇಗುಲಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು ಬಣ್ಣ ಬಣ್ಣದ ಹೂವಿನಿಂದ ಸಿಂಗಾರ ಮಾಡಲಾಗಿದೆ.
ಕಾಂತಾರ‘ ಸಿನಿಮಾ ವರ್ಲ್ಡ್ ವೈಡ್ ರೀಚ್ ಸಕ್ಸಸ್ ಫುಲ್ ಪ್ರದರ್ಶನ ಕಂಡಿತ್ತು. ‘ಕಾಂತಾರ‘ ಪಾರ್ಟ್ 2 ಯಾವಾಗ ಎಂದು ಕಾದು ಕುಳಿತ ಫ್ಯಾನ್ಸ್ ಗೆ ಸಿಹಿಸುದ್ದಿ ಸಿಕ್ಕಿದೆ.
ಇದೇ ನವೆಂಬರ್ ಗೆ ಮುಹೂರ್ತ ಫಿಕ್ಸ್ ಆಗಿದೆ. ಹೊಂಬಾಳೆ ಸಂಸ್ಥೆ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2′ ಚಿತ್ರದ ಮುಹೂರ್ತ ಇಂದು ಸರಳವಾಗಿ ನಡೆದಿದೆ.


