nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026
    Facebook Twitter Instagram
    ಟ್ರೆಂಡಿಂಗ್
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    • ದುಶ್ಚಟ ಬಿಟ್ಟು ಕ್ರೀಡೆಯಲ್ಲಿ ತೊಡಗಲು ಕರೆ: ಶಾಸಕ ಕೆ.ಎನ್.ರಾಜಣ್ಣ
    • ಹೇಮಾವತಿ ಲಿಂಕ್ ಕೆನಾಲ್‌ ಗೆ ನಾನು ವಿರೋಧಿ: ಶಾಸಕ ಎಸ್.ಆರ್. ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಮ್ಮೆಲ್ಲರ ಪ್ರೀತಿ, ಆಶಯದಿಂದ ಸತೀಶ್‌ ಪ್ರತಿಭಾ ಪುರಸ್ಕಾರ ಆರಂಭ: ಸಚಿವ ಸತೀಶ್‌ ಜಾರಕಿಹೊಳಿ
    ರಾಜ್ಯ ಸುದ್ದಿ November 28, 2023

    ನಿಮ್ಮೆಲ್ಲರ ಪ್ರೀತಿ, ಆಶಯದಿಂದ ಸತೀಶ್‌ ಪ್ರತಿಭಾ ಪುರಸ್ಕಾರ ಆರಂಭ: ಸಚಿವ ಸತೀಶ್‌ ಜಾರಕಿಹೊಳಿ

    By adminNovember 28, 2023No Comments2 Mins Read
    yamakanamaradi

    ಯಮಕನಮರಡಿ: ಸತೀಶ್‌ ಪ್ರತಿಭಾ ಪುರಸ್ಕಾರದಲ್ಲಿ ಭಾಗವಹಿಸಿದ್ದ ಕೆಲವು ಮಕ್ಕಳು ಗೆದ್ದಿರಬಹುದು, ಕೆಲವರು ಸೋತಿರಬಹುದು. ಆದರೆ ಸೋತ ಮಕ್ಕಳು ಚಿಂತಿಸುವ ಅವಶ್ಯಕತೆ ಇಲ್ಲ. ಮುಂದಿನ ವರ್ಷ ಮತ್ತೆ ನಿಮಗೆ ಗೆಲ್ಲುವ ಅವಕಾಶ ಸಿಗುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

    ಇಲ್ಲಿನ ಎನ್‌ ಎಸ್ ‌ಎಫ್ ಶಾಲಾ ಆವರಣದಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ 10ನೇ ಸತೀಶ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


    Provided by
    Provided by

    10ನೇ ಸತೀಶ್‌ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕಳೆದ ಎರಡು ದಿನಗಳಿಂದ ಯಮಕನಮರಡಿಯಲ್ಲಿ ಅದ್ದೂರಿಯಾಗಿ ಜರುಗಿದ್ದು, ಅತ್ಯಂತ ಯಶಸ್ಸು ಕಂಡಿದೆ. ಕಳೆದ ಮೂರು ವರ್ಷಗಳಿಂದ ಕೋವಿಡ್‌ ಕಾರಣದಿಂದ ಸತೀಶ್‌ ಪುರಸ್ಕಾರ ಕಾರ್ಯಕ್ರಮ ಸ್ಥಗಿತಗೊಳಿಸಿದ್ದೆ, ನಿಮ್ಮೆಲ್ಲರ ಪ್ರೀತಿ, ಆಶಯಯಿಂದ ಮತ್ತೆ ಈ ಕಾರ್ಯಕ್ರಮ ಆರಂಭವಾಗಿದೆ ಎಂದರು.

    ಸತೀಶ್‌ ಪ್ರತಿಭಾ ಪುರಸ್ಕಾರ ವೇದಿಕೆ ಮೂಲಕ ಅನೇಕ ಗ್ರಾಮೀಣ ಪ್ರತಿಭೆಗಳು ಹೊರಹೊಮ್ಮಿದ್ದು, ಬಹಳ ಸಂತೋಷದ ವಿಷಯ. ಹತ್ತು ವರ್ಷಗಳ ಹಿಂದೆ ಈ ಬೀಜವನ್ನು ನೆಡುವ ಪ್ರಯತ್ನ ಮಾಡಿದ್ದಿವಿ. ಕಾರಣ ಈ ಬೀಜ ಇಂದು ಹೆಮ್ಮರವಾಗಿ ಬೆಳೆಯುತ್ತಿದೆ. ಇದರ ಫಲ ಹುಕ್ಕೇರಿ ತಾಲೂಕು, ಬೆಳಗಾವಿ ಜಿಲ್ಲೆ, ರಾಜ್ಯಕ್ಕೆ ಹೋಗುತ್ತದೆ ಎಂಬ ವಿಶ್ವಾಸ ಇದೆ. ಸತೀಶ್‌ ಪುರಸ್ಕಾರ ಪ್ರತಿಭೆಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಬೇಕೆಂದು ಹಾರೈಸಿದರು.

    ರಿಯಾಜ್‌ ಚೌಗಲಾ, ಕಿರಣ ರಜಪೂತ, ರವಿ ಜಿಂಡ್ರಾಳೆ ಕಾರ್ಯಕ್ರಮ ಸಂಘಟಿಸಿದ್ದು, ನಿಮ್ಮ ಮಕ್ಕಳ ಪ್ರಗತಿಗೆ, ನಿಮಗಾಗಿ ಈ ಕಾರ್ಯಕ್ರಮ ಮಾಡುತ್ತಿದ್ದು, ಎಲ್ಲರೂ ಸಹಕಾರ ನೀಡಬೇಕೆಂದರು.

    ನಿಡಸೋಸಿಯ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಪಂಚಮ ಶಿವಲಿಂಗೇಶ್ವರ ಮಹಾಸ್ವಾಮೀಜಿ ಮಾತನಾಡಿ, ಒಬ್ಬ ವ್ಯಕ್ತಿ ಮನಸ್ಸು ಮಾಡಿದರೆ ಸಮಾಜದಲ್ಲಿ ಏನಾದರೂ ಸಾಧಿಸಬಹುದು ಎನ್ನುವುದಕ್ಕೆ ಸಚಿವ ಸತೀಶ್ ಜಾರಕಿಹೊಳಿಯವರೇ ಸಾಕ್ಷಿ. ಅವರ ಸಮಾಜಮುಖಿ ಕಾರ್ಯ ವೈಖರಿಯಿಂದ ಯಮಕನಮರಡಿ ಕ್ಷೇತ್ರದ ಮಕ್ಕಳು, ಯುವಕರು ಈ ನಾಡಿನ ಸಾಹಿತ್ಯ, ಸಂಸ್ಕೃತಿ ಉಳಿಸಿ, ಬೆಳೆಸುತ್ತಿದ್ದಾರೆ. ಅವರು ಯಾವುದೇ ಕಾರ್ಯ ಕೈಗೊಂಡರು ಅಚ್ಚುಕಟ್ಟಾಗಿ ಮಾಡುತ್ತಿದ್ದು, ದೇವರು ಅವರಿಗೆ ಓಳ್ಳೆಯ ಆಯುಷ್ಯ, ಆರೋಗ್ಯ ನೀಡಲೆಂದು ಹರಿಸಿದರು.

    ಹತ್ತರಗಿಯ ಹರಿ ಮಂದಿರದ ಆನಂದ ಮಹಾರಾಜ ಗೋಸಾವಿ ಮಾತನಾಡಿ, ಸತೀಶ್ ಪ್ರತಿಭಾ ಪುರಸ್ಕಾರ ನೋಡಿ ಸಂತೋಷ ಆಗುತ್ತಿದೆ. ಕಲೆಗಳನ್ನು ಗೌರವಿಸಿ, ಕಲಾವಿದರನ್ನು ಪೋಷಿಸುವ ಕೆಲಸ ಮಾಡುತ್ತಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಕಾರ್ಯ ನಿಜಕ್ಕೂ ಶಾಘ್ಲನೀಯ ಎಂದರು.

    ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸಚಿವ ಸತೀಶ್ ಜಾರಕಿಹೊಳಿ ಉತ್ತರ ಕರ್ನಾಟಕದ ಮಕ್ಕಳ ಜೀವನಾಡಿ. ಜಾನಪದ ಕಲೆಗಳು ನಶಿಸಿ ಹೋಗುವ ಕಾಲದಲ್ಲಿ ಜನಪದ ಕಲೆಯನ್ನು ಉಳಿಸಿ, ಬೆಳೆಸುತ್ತಿರುವ ಕಾರ್ಯಕ್ಕೆ ಸಚಿವ ಸತೀಶ್ ಆದ್ಯತೆ ನೀಡುತ್ತಿದ್ದಾರೆ. ಪಾಲಕರು ಕನ್ನಡ ಉಳಿವಿಗಾಗಿ ಆದ್ಯತೆ ನೀಡಬೇಕು. ಸ್ವದೇಶಿ ಸಂಸ್ಕೃತಿಯನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದು ಕರೆ ನೀಡಿದರು.

    ಊಟ-ಉಪಹಾರ ಪರಿಶೀಲಿಸಿದ ಸಚಿವರು:

    10ನೇ ಸತೀಶ್‌ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ವ್ಯವಸ್ಥೆ ಮಾಡಿದ ಊಟ-ಉಪಹಾರವನ್ನು ಸ್ವತಃ ಸಚಿವ ಸತೀಶ್‌ ಜಾರಕಿಹೊಳಿ ಅವರು ಪರಿಶೀಲಿಸಿದರು. ಕಾರ್ಯಕ್ರಮ ನಡೆಯುತ್ತಿರುವಗಲೇ ಸ್ವತಃ ವಿದ್ಯಾರ್ಥಿಗಳು ಊಟ ಮಾಡುತ್ತಿರು ಸ್ಥಳಕ್ಕೆ ಭೇಟಿ ನೀಡಿ ತಿಂಡಿ

    ಪದಾರ್ಥಗಳನ್ನು ಪರಿಶೀಲಿಸಿದರು. ಸಚಿವರನ್ನು ಕಂಡ ವಿದ್ಯಾರ್ಥಿಗಳು ತಮಗೆ ನೀಡಿದ ಬಹುಮಾನ ಪತ್ರಗಳನ್ನು ಹಿಡಿದು ಪೋಟೋ, ಸೆಲ್ಫಿ ತೆಗೆದುಕೊಂಡು ಖುಷಿ ಪಟ್ಟರು. ಮಕ್ಕಳ ಮೇಲಿರುವ ಸಚಿವರ ಪ್ರೀತಿ, ಕಾಳಜಿಯನ್ನು ನೋಡಿ ಸ್ಥಳದಲ್ಲಿದ್ದ ಶಿಕ್ಷಕರು ಸಂತಸಗೊಂಡರು.

    ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸತ್ಕರಿಸಿದರು. ಇದೇ ವೇಳೆ ಹುಕ್ಕೇರಿ ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾದನೆಗೈದ ಯುವ ಸಾಧಕರನ್ನು ಶ್ರೀಗಳು, ಗಣ್ಯರು ಸತ್ಕರಿಸಿದರು.

    admin
    • Website

    Related Posts

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಭಾರಿ ಸಂಚಲನ ಉಂಟಾಗಿದ್ದು, ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯ ನಂತರ…

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    May 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.