ತಮಿಳುನಾಡು: ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಅವರ ಜನ್ಮದಿನಕ್ಕೆ ಉಡುಗೊರೆಯಾಗಿ ಡಿಸಿಎಂ ಹುದ್ದೆ ನೀಡಲು ತಮಿಳುನಾಡು ಸಿಎಂ ಸ್ಟಾಲಿನ್ ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ಡಿಸೆಂಬರ್ 17 ರಂದು ಸೇಲಂನಲ್ಲಿ ನಡೆಯಲಿರುವ ಡಿಎಂಕೆ ಯುವ ಘಟಕದ ಸಮಾವೇಶದಲ್ಲಿ ಈ ವಿಚಾರವನ್ನು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ಹೇಳಲಾಗಿದೆ.
ಪಕ್ಷದ ಕಾರ್ಯಕರ್ತರು ಹಾಗೂ ನಾಯಕರು ಇದಕ್ಕೆ ಒಪ್ಪಿಗೆ ಸೂಚಿಸಿದ್ದು, ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಗೆ ಡಿಸಿಎಂ ಪಟ್ಟ ನೀಡುವ ಸಾಧ್ಯತೆಯಿದೆ ಎಂದು ಡಿಎಂಕೆ ಪದಾಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ.


