ವಿಜಯಪುರ: ಸಿಎಂಗೆ ಬಿಆರ್ ಪಾಟೀಲ್ ಅವರು ಪತ್ರ ಬರೆದಿದ್ದಾರೆ. ಸಿಎಂ ಅದರ ಬಗ್ಗೆ ನಿರ್ಣಯ ಮಾಡುತ್ತಾರೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸದನದಲ್ಲಿ ಏನು ಹೇಳಿದ್ದೇನೆ ಎಂಬುದರ ಬಗ್ಗೆ ಮಾಹಿತಿ ಇದೆ. ನಿಮಗೆ ಕೊಡುತ್ತೇನೆ. ಅದನ್ನು ನೀವು ನೋಡಿ. ನಂತರ ನೀವೇ ನಿರ್ಧರಿಸಿ ಎಂದರು.
ನಾನು ಅವರ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ವಿಚಾರದಲ್ಲಿ ನನ್ನನ್ನು ಸಿಎಂ ಅವರು ಸಂಪರ್ಕಿಸಿಲ್ಲ. ಬಿಆರ್ ಪಾಟೀಲ್ ಪತ್ರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೇ ನಿರ್ಧಾರ ಮಾಡುತ್ತಾರೆ ಎಂದು ಸ್ಪಷ್ಟನೆ ನೀಡಿದರು.


