ಬೆಂಗಳೂರು: ಕೋರ್ಟ್ ಆದೇಶದ ಬಗ್ಗೆ ನನ್ನ ಲಾಯರ್ ಗಳು ತಿಳಿಸಬೇಕು. ಅವರು ನನಗೆ ತಿಳಿಸಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕೋರ್ಟ್ ಆದೇಶದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಸಿದ ಅವರು, ಯಾರು ಯಾರು ಏನು ಮಾತನಾಡಿದ್ದಾರೆ ಎಲ್ಲ ನಮ್ರತೆಯಿಂದ ನೋಡ್ತಿದ್ದೇನೆ, ನೋಡಿದ್ದೇನೆ. ಸೂಕ್ತ ಸಮಯದಲ್ಲಿ ಅದಕ್ಕೆಲ್ಲ ಉತ್ತರ ಕೊಡ್ತೇನೆ.
ನಾನೇನು ತಪ್ಪು ಮಾಡಿಲ್ಲ. ನಾನು ಮಾಡಿದ್ದೆಲ್ಲ ಪಾರ್ಟಿ ಸಲುವಾಗಿ ಮಾಡಿದ ಕೆಲಸ. ಪಕ್ಷಕ್ಕೋಸ್ಕರ ನಾನು ಕೆಲಸ ಮಾಡಿದ್ದು. ಸಾಕಷ್ಟು ಅನುಭವಿಸಿದ್ದೇನೆ. ಮುಂದೆಯೂ ಕೂಡ ತೊಂದರೆ ಕೊಡ್ತೀನಿ ಅಂದ್ರೆ ಅದನ್ನು ನೋಡಲು ಭಗವಂತ ಇದ್ದಾನೆ. ನನಗೆ ತೊಂದರೆ ಕೊಟ್ಟಿದ್ದಕ್ಕೆ ಏನಾಯ್ತು ಅಂತ ರಾಜ್ಯದ ಜನರೇ ನೋಡಿದ್ದಾರೆ. ನನ್ನ ಪರವಾಗಿ ನಿಂತ ಎಲ್ಲರಿಗೂ ಕೋಟಿ ವಂದನೆ ಅಂತ ತಿಳಿಸಿದರು.


