ವಿಜಯಪುರ: ಮೈಸೂರು ಹಾಗೂ ಮಂಡ್ಯದಲ್ಲಿ ನಡೆದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ.
ಭ್ರೂಣ ಹತ್ಯೆ ಪ್ರಕರಣದಲ್ಲಿ ರಾಜ್ಯದ ಒಬ್ಬ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಅಸಹಾಯಕ ಮಾತುಗಳನ್ನು ನಿರೀಕ್ಷಿಸರಲಿಲ್ಲ. ಗೃಹ, ಪೊಲೀಸ್ ಹಾಗೂ ಬೇಹುಗಾರಿಕೆ ಇಲಾಖೆಯ ಸಾಮೂಹಿಕ ವೈಫಲ್ಯವೇ ಭ್ರೂಣ ಹತ್ಯೆಗೆ ಕಾರಣವಾಗಿದೆ.
ಈ ಇಲಾಖೆಗಳು ಸರಿಯಾಗಿ ಕಾರ್ಯ ನಿರ್ವಹಿಸಿದ್ದರೆ ಭ್ರೂಣ ಹತ್ಯೆ ತಡೆಯಬಹುದಿತ್ತು ಎಂದು ಅವರು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.


