ಇತ್ತೀಚೆಗೆ ಬಾರ್ ಆಂಡ್ ರೆಸ್ಟೋರೆಂಟ್ ಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಸುಲಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಆರ್. ಟಿ. ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನೆಲಮಂಗಲದ ಇಮ್ರಾನ್ ಅಲಿಯಾಸ್ ಬೊಡ್ಡೆ(29), ಕೆ. ಜಿ. ಹಳ್ಳಿಯ ಮೋಹಿತ್ ಅಲಿಯಾಸ್ ಮೋಹನ್(24), ಅರಾಫತ್ ಅಹಮದ್(25) ಹಾಗೂ ಸೈಯದ್ ಮಾಜ್(22) ಬಂಧಿತರು. ಆರೋಪಿಗಳಿಂದ 12,500 ರೂ. ನಗದು ಹಾಗೂ ನಾಲ್ಕು ದ್ವಿಚಕ್ರವಾಹನ ಜಪ್ತಿ ಮಾಡಲಾಗಿದೆ.


