ಬೆಳಗಾವಿ: ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಧಾರವಾಡ ಮೂಲದ ವಿದ್ಯಾಶ್ರೀ (32) ಮೃತ ದುರ್ದೈವಿ. ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆ ಪಕ್ಕದಲ್ಲಿ ದಿನಸಿ ಹೊತ್ತು ಹೊರಟಿದ್ದ ವೃದ್ಧನಿಗೆ ಬೈಕ್ ಡಿಕ್ಕಿಯಾಗಿತ್ತು. ಈ ವೇಳೆ ಬೈಕ್ ನ ಸಮೀಪದಲ್ಲಿ ಸಂಚರಿಸುತ್ತಿದ್ದ ಬಸ್ಸಿನ ಚಕ್ರದಡಿಗೆ ವಿದ್ಯಾಶ್ರೀ ಬಿದ್ದಿದ್ದು, ಬಸ್ ನ ಚಕ್ರ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ವೇಳೆ ಬೈಕ್ ಸವಾರ ಅದೃಷ್ಟವಶಾತ್ ಬಚಾವ್ ಆಗಿದ್ದಾರೆ. ತಲೆಗೆ ಹೆಲ್ಮೆಟ್ ಹಾಕಿದ್ದರಿಂದ ಬಸ್ ನ ಚಕ್ರ ತಲೆಯ ಮೇಲೆ ಹರಿದರೂ ಅವರು ಬದುಕುಳಿದಿದ್ದಾರೆ.


