ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಸರ್ಕಾರಿ ಶಾಲೆಗಳ ಕಟ್ಟಡಗಳನ್ನು ಪರಿಶೀಲಿಸಿ ಸೂಕ್ತ ಭದ್ರತೆ ಕೈಗೊಳ್ಳಬೇಕು ಎಂದು ಬಿಬಿಎಂಪಿ ಪೂರ್ವವಲಯದ ಜಂಟಿ ಆಯುಕ್ತ ಪಲ್ಲವಿ ಅವರನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಕೂಡೆಂಟ್ ಆರ್ಗನೈಸೇಷನ್ (ಎಐಡಿಎಸ್ ಒ) ಮನವಿ ಮಾಡಿದೆ.
ನಗರದಲ್ಲಿ ಇದೇ ರೀತಿಯ ಹಲವು ಶಾಲೆಗಳು ಕುಸಿದು ಬೀಳುವ ಹಂತದಲ್ಲಿವೆ. ಅಂತಹ ಶಾಲೆಗಳನ್ನು ಗುರುತಿಸಬೇಕು. ಎಲ್ಲ ಸರ್ಕಾರಿ, ಬಿಬಿಎಂಪಿ ಶಾಲೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದೆ.


