ನರೇಂದ್ರ ಮೋದಿ ಅವರು ಬಂದ ಕಡೆಗಳಲ್ಲಿ ಬಿಜೆಪಿಗೆ ಸೋಲಾಗುತ್ತದೆ ಎಂದಿದ್ದ ಸಿಎಂ ಸಿದ್ಧರಾಮಯ್ಯರ ಹೇಳಿಕೆಗೆ ಮಾಜಿ ಡಿಸಿಎಂ ಅಶ್ವತ್ಥನಾರಾಯಣ್ ತಿರುಗೇಟು ಕೊಟ್ಟಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ಅವರು, 2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಇವರೇ ಸಮ್ಮಿಶ್ರ ಸರ್ಕಾರವೇ ಅಧಿಕಾರದಲ್ಲಿತ್ತು. ಲೋಕಸಭಾ ಚುನಾವಣೆ ಫಲಿತಾಂಶ ಏನು ಬಂದಿದೆ? ಎಂದು ಪ್ರಶ್ನಿಸಿದರು.
ಈಗಲೂ ಅಷ್ಟೇ 2024 ರಲ್ಲಿ ಲೋಕಸಭಾ ಚುನಾವಣೆ ಎದುರಾಗುತ್ತಿದೆ. ಆಗ ಫಲಿತಾಂಶ ನೋಡಲಿ ಎಂದು ಅಶ್ವತ್ಥನಾರಾಯಣ್ ತಿರುಗೇಟು ಕೊಟ್ಟಿದ್ದಾರೆ.
ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಸಿಎಂಗೆ ರಾಜ್ಯದಲ್ಲಿರುವ ಬರ ಪರಿಸ್ಥಿತಿ ನೆನಪಾಗಲಿಲ್ಲ. ಅವರ ಸಂಪುಟದಲ್ಲಿನ ಮಂತ್ರಿಗಳು ಮನೆ ನವೀಕರಣಕ್ಕೆ ಇಳಿದಿರುವುದು ಕಣ್ಣಿಗೆ ಬೀಳಲಿಲ್ಲ. ನಮ್ಮ ನಾಯಕ ನರೇಂದ್ರ ಮೋದಿ ಮಾತ್ರ ಕಣ್ಣಿಗೆ ಕಾಣುತ್ತಾರೆ ಎಂದು ಕಿಡಿಕಾರಿದ್ದಾರೆ.


