ಬೆಂಗಳೂರಿನಲ್ಲಿ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ರಾಜ್ಯದಲ್ಲಿ ಸುಧಾರಿತ 108 ಆಂಬುಲೆನ್ಸ್ ಸೇವೆ ಒದಗಿಸುವ ನಿಟ್ಟಿನಲ್ಲಿ ಹೊಸದಾಗಿ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್‌ಗಳಿಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.
ರಾಜ್ಯದಲ್ಲಿ ಹೊಸ ಆಂಬುಲೆನ್ಸ್‌ಗಳು ನಮ್ಮ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ಉಚಿತ ಸೇವೆ ಲಭ್ಯವಾಗುವುದರ ಜೊತೆಗೆ ಹೊಸ ಆಂಬುಲೆನ್ಸ್‌ಗಳು ನಮ್ಮ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಿದೆ. 108 ಅಂಬ್ಯುಲೆನ್ಸ್ ಸೇವೆಯನ್ನು ಬಲಪಡಿಸುವತ್ತ ಇದು ನಮ್ಮ ಮೊದಲ ಹೆಜ್ಜೆ ಎಂದು ಹೇಳಿದರು.
ರಾಜ್ಯದಲ್ಲಿನ 262 ಅತ್ಯಾಧುನಿಕ ಆಂಬುಲೆನ್ಸ್ ವಿಶೇಷತೆ ಏನು ಎಂಬುದರ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಟ್ರಾನ್ಸ್ ಪೋರ್ಟ್ ವೆಂಟಿಲೇಟರ್, ಡಿಫಿಬ್ರಿಲೇಟರ್‌ಗಳನ್ನು ಒಳಗೊಂಡ 105 ಸುಧಾರಿತ ಲೈಫ್ ಸಪೋರ್ಟ್ ವ್ಯವಸ್ಥೆ ಹೊಂದಿರುವ ಆ್ಯಂಬುಲೆನ್ಸ್‌ಗಳು ಹಾಗೂ 157 ಬೇಸಿಕ್ ಲೈಫ್ ಸಪೋರ್ಟ್ ಆ್ಯಂಬುಲೆನ್ಸ್‌ಗಳ ಸೇರ್ಪಡೆಯಿಂದಾಗಿ ತುರ್ತು ಪರಿಸ್ಥಿತಿಗಳಲ್ಲಿ ಅಮೂಲ್ಯ ಜೀವಗಳನ್ನು ಉಳಿಸಲು ನೆರವಾಗಲಿದೆ ಎಂದರು.


