ಬೀದರ್: ಜಿಲ್ಲೆಯ ಔರಾದ ತಾಲೂಕಿನ ವನಮಾರಪಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹೊಸದಾಗಿ ನಿರ್ಮಿಸಲಾದ ಹೆಚ್ಚುವರಿ ತರಗತಿ ಕೋಣೆಗಳನ್ನು ಮಾಜಿ ಸಚಿವ, ಔರಾದ ತಾಲೂಕಿನ ಶಾಸಕ ಪ್ರಭು ಬಿ ಚವ್ಹಾಣ ಉದ್ಘಾಟಿಸಿದರು.
ಇದೇ ವೇಳೆ ಮಾತನಾಡಿದ ಅವರು, ಮಕ್ಕಳಿಗೆ ಸರಿಯಾಗಿ ಪಾಠ ಮಾಡಬೇಕೆಂದು ಶಿಕ್ಷಕರಿಗೆ ಮಾರ್ಗದರ್ಶನ ನೀಡಿದರು. ಬಳಿಕ ಖಾನಾಪೂರ ಗ್ರಾಮದಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಲಿಂಗದಳ್ಳಿ (ಕೆ) ಗ್ರಾಮದ ಅಂಗನವಾಡಿ ಕೆಂದ್ರಕ್ಕೆ ಭೇಟಿ ನೀಡಿದ ಅವರು, ಶಾಲೆಯ ಎಲ್ಲಾ ಕೋಣೆಗಳು ಆವರಣವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು, ಮಕ್ಕಳಿಗೆ ಸರಿಯಾಗಿ ಬೋಧನೆ ಮಾಡಬೇಕು ಶಿಕ್ಷಕರು ಗೈರಾಗದೆ, ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಬೇಕೆಂದು ಸೂಚಿಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್


