ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ತವರು ಜಿಲ್ಲೆ ಬೆಳಗಾವಿಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಿರುವುದು ಗಮನಾರ್ಹ. ಜಿಲ್ಲೆಯಲ್ಲಿ ಹಲವು ಹೆಣ್ಣುಮಕ್ಕಳು 18 ವರ್ಷ ತುಂಬುವ ಮುನ್ನವೇ ಗರ್ಭಿಣಿಯಾಗುತ್ತಿದ್ದಾರೆ.
ಜಿಲ್ಲೆಯಲ್ಲಿ ಕಳೆದ 19 ತಿಂಗಳಲ್ಲಿ 361 ಹೆಣ್ಣು ಮಕ್ಕಳು ಗರ್ಭಿಣಿಯಾಗಿದ್ದಾರೆ ಎಂದು ಆರ್ ಸಿಎಚ್ ಪೋರ್ಟಲ್ ನ ಅಂಕಿ ಅಂಶಗಳು ತಿಳಿಸಿವೆ. ಇದರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಏಪ್ರಿಲ್ 2022ರಿಂದ ಮಾರ್ಚ್ 2023ರ ನಡುವೆ 208 ಹುಡುಗಿಯರು, ಏಪ್ರಿಲ್ 1ರಿಂದ ಅಕ್ಟೋಬರ್ 31ರ ಅವಧಿಯಲ್ಲಿ 153 ಹುಡುಗಿಯರು ಬಾಲ್ಯ ವಿವಾಹ ಆಗಿದ್ದಾರೆ ಎಂದು ಆರ್ ಸಿಎಚ್ ತಿಳಿಸಿದೆ.


