ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕ ಎನ್. ಆರ್. ನಾರಾಯಣಮೂರ್ತಿ ಅವರು ಮೂಲಸೌಕರ್ಯ ಕ್ಷೇತ್ರದಲ್ಲಿ ಕೆಲಸ ಮಾಡುವ ನೌಕರರು ದಿನಕ್ಕೆ 3 ಪಾಳಿಯಲ್ಲಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೂಲಸೌಕರ್ಯ ನೌಕರರು ಬೆಳಿಗ್ಗೆ 11 ರಿಂದ ಸಂಜೆ 5 ರವರೆಗೆ ಕೆಲಸ ಮಾಡುವ ಅಭ್ಯಾಸವನ್ನು ಬಿಡಬೇಕು. ಅಭಿವೃದ್ಧಿಯಲ್ಲಿ ಚೀನಾವನ್ನು ಮೀರಿಸಲು 3-ಶಿಫ್ಟ್ ವ್ಯವಸ್ಥೆ ಭಾರತಕ್ಕೆ ಅಗತ್ಯವಾಗಿದೆ ಎಂದು ಸಲಹೆ ನೀಡಿದರು.
ನಾರಾಯಣಮೂರ್ತಿ ಅವರ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ.


