ನಿವೃತ್ತ ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಅವರ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಡೌನ್ ಲೋಡ್ ಮಾಡಿಕೊಂಡು, ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿರುವ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ‘ಯಾರೂ ಹಣ ನೀಡಬಾರದು. ಸೈಬರ್ ವಂಚಕರು ಈ ರೀತಿ ನಕಲಿ ಖಾತೆಗಳ ಸೃಷ್ಟಿಸಿ ಮೋಸ ಎಸಗುತ್ತಿದ್ದಾರೆ. ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ’ ಪೊಲೀಸರು ಮನವಿ ಮಾಡಿದ್ದಾರೆ.


