ನಕಲಿ ನೋಟು ತಯಾರಿಸುವ ಜಾಲದ ಮೇಲೆ ಎನ್ ಐಎ ಅಧಿಕಾರಿಗಳ ದಾಳಿ ಮಾಡಿದ್ದು, ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಬೆಂಗಳೂರು, ಬಳ್ಳಾರಿಯಲ್ಲಿ ಎನ್ ಐಎ ದಾಳಿ ನಡೆಸಿದೆ. ಈ ವೇಳೆ ಪ್ರಮುಖ ಆರೋಪಿ ರಾಹುಲ್ ತಾನಾಜಿ ಎಂಬಾತನನ್ನು ಬಂಧಿಸಲಾಗಿದೆ.
ಮನೆಯಲ್ಲೇ 500, 200, 100 ರೂಪಾಯಿಯ ಮುಖಬೆಲೆಯ ನಕಲಿ ನೋಟು ತಯಾರಿಸುತ್ತಿದ್ದ. ಇದೀಗ ಪೊಲೀಸರು ನೋಟು ತಯಾರಿಸುವ ಪೇಪರ್, ಪ್ರಿಂಟಿಂಗ್ ಮಶಿನ್ ಗಳನ್ನು ವಶಕ್ಕೆ ಪಡೆದಿದ್ದಾರೆ.


