ಚೀನಾದಲ್ಲಿ ನ್ಯುಮೋನಿಯಾ ವೈರಸ್ ಉಲ್ಬಣವಾಗಿದ್ದು, ಈಗಾಗಲೇ ದೇಶಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ.
ಉಸಿರಾಟ ತೊಂದರೆ ಅನುಭವಿಸುತ್ತಿರುವ ರೋಗಿಗಳ ಮಾಹಿತಿ ಸಂಗ್ರಹ ಮಾಡುತ್ತಿದೆ. ಜೊತೆಗೆ ವೈದ್ಯಕೀಯ ಸೇವೆ ಒದಗಿಸಲು ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ತಯಾರಿ ನಡೆಸುತ್ತಿದೆ.
ಇನ್ನು ಡಿ.4ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದೆ. ಈ ವೇಳೆ ವೈರಸ್ ಬಗ್ಗೆ ಎಚ್ಚರ ವಹಿಸಲು ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಕಂಟ್ರೋಲ್ ರೂಂ ತೆರೆಯಲಾಗಿದೆ.


