ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದ್ದು, ಉರಿ ಉರಿ ವಾತಾವರಣ ಉಂಟಾಗಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ ವಾತಾವರಣವೇ ಇರಲಿದೆ. ಕೆಲವೆಡೆ ಗರಿಷ್ಠ ಉಷ್ಣಾಂಶ ಹೆಚ್ಚಾದರೆ, ಉಳಿದೆಡೆ ಕನಿಷ್ಠ ಉಷ್ಣಾಂಶ ಕಡಿಮೆ ಆಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಮುಸುಕುವ ಸಾಧ್ಯತೆ ಇದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆಯಿದೆ.


