ನಗರದ ನಾಗರಭಾವಿ ಮುಖ್ಯರಸ್ತೆಯಲ್ಲಿರುವ ಚಂದ್ರಾ ಲೇಔಟ್ ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ, ವೇಗವಾಗಿ ಬಂದ ಕಾರೊಂದು ನಿಂತಿದ್ದ ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ.
ಕಾರಿಗೆ ಬೆಂಕಿ ಹೊತ್ತಿಕೊಂಡ ತಕ್ಷಣ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ನಲ್ಲಿದ್ದ ಪ್ರಯಾಣಿಕರು ಬೇಗನೆ ಹೊರಬಂದು ಗಾಯಗಳೊಂದಿಗೆ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅಪಘಾತದಲ್ಲಿ ಕನಿಷ್ಠ ಮೂವರು ಗಾಯಗೊಂಡಿದ್ದು, ಇತರರು ಯಾವುದೇ ಪ್ರಾಣಾಪಾಯ ಇಲ್ಲದೆ ಪಾರಾಗಿದ್ದಾರೆ.
ಮೂಲಗಳ ಪ್ರಕಾರ, ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ ಗೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದಾಗಿ ಕಾರ್ ಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಅವಘಡದ ನಂತರ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.


